ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾಲಿಂಗಪುರ | ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಕಿಡಿ

Published 18 ಆಗಸ್ಟ್ 2024, 15:25 IST
Last Updated 18 ಆಗಸ್ಟ್ 2024, 15:25 IST
ಅಕ್ಷರ ಗಾತ್ರ

ಮಹಾಲಿಂಗಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅನುಮತಿ ನೀಡಿರುವುದನ್ನು ಖಂಡಿಸಿ ಸಮೀಪದ ಸೈದಾಪುರ ಕ್ರಾಸ್‌ನಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾನುವಾರ ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕಾಂಗ್ರೆಸ್ ಸರ್ಕಾರದ ಏಳಿಗೆ ಸಹಿಸುತ್ತಿಲ್ಲ. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ಅಧಿಕಾರ ಕಸಿಯಲು ಯತ್ನಿಸುತ್ತಿದೆ. ರಾಜ್ಯ ಸರ್ಕಾರಕ್ಕೆ ಕಪ್ಪುಮಸಿ ಬಳಿಯಲು ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡು ಸಿದ್ದರಾಮಯ್ಯ ಸರ್ಕಾರವನ್ನು ಅಸ್ಥಿರಗೊಳಿಸಲಾಗುತ್ತಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಂಗನಗೌಡ ಪಾಟೀಲ, ಮಹಾದೇವ ಮಾರಾಪುರ, ಮಲ್ಲಪ್ಪ ಸಿಂಗಾಡಿ, ಪಿಯೂಷ್ ಓಸ್ವಾಲ, ದುಂಡಪ್ಪ ಜಾಧವ, ಪ್ರಭು ತಂಬೂರಿ, ಭೀಮಶಿ ಸಸಾಲಟ್ಟಿ, ರಾಜು ಮುಲ್ಲಾ, ವಿಠ್ಠಲ ಢವಳೇಶ್ವರ, ಎಚ್.ಎಸ್.ಭಜಂತ್ರಿ, ಗಣಪತಿ ಬೀಸನಕೊಪ್ಪ, ಹಣಮಂತ ಕೊಣ್ಣೂರ, ವಿಠ್ಠಲ ಹೊಸಮನಿ, ನಾಗೇಶ ಗಸ್ತಿ, ಸುರೇಶ ಜೋಗನ್ನವರ, ಬಸವರಾಜ ಮಾದರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT