ಬಾದಾಮಿ: ‘ಎರಡು ವರ್ಷದ ಆಡಳಿತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ, ಶಾಸಕರ ಆಂತರಿಕ ಕಚ್ಚಾಟ ಮತ್ತು ಕೋಮು ಗಲಭೆಗಳಿಂದ ಜನ ಬೇಸತ್ತು ಹೋಗಿದ್ದಾರೆ’ ಎಂದು ಜಿಲ್ಲಾ ಘಟಕದ ಜೆಡಿಎಸ್ ಅಧ್ಯಕ್ಷ ಹನುಮಂತ ಮಾವಿನಮರದ ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನಾ ರ್ಯಾಲಿಯ ನಂತರ ಇಲ್ಲಿನ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಕಾಂಗ್ರೆಸ್ ಪಕ್ಷದ ಆಡಳಿತದ ವಿರುದ್ಧ ಟೀಕಿಸಿದರು.

ಜೆಡಿಎಸ್ ಮುಖಂಡರಾದ ಎಂ.ಎಸ್.ಹಿರೇಹಾಳ, ಅಜೀಜ್ ಮುಲ್ಲಾ, ತೋಯಿಬಾ ಖಲೀಫ್, ಬಾಳು ಹುನಗುಂಡಿ, ಚಂದ್ರಕಾಂತ ಶೇಖಾ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಮಾತನಾಡಿದರು.

ಬಸವೇಶ್ವರ ವೃತ್ತದಿಂದ ಬಿ.ಅರ್.ಅಂಬೇಡ್ಕರ್ ವೃತ್ತದವರೆಗೆ ಮುಖ್ಯ ಬೀದಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.