ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಹತ್ಯೆ ವಿರೋಧಿಸಿ ಪ್ರತಿಭಟನೆ

ಮಾರುಕಟ್ಟೆ ಸಂಪೂರ್ಣ ಬಂದ್; ಬಂದೋಬಸ್ತ್‌ಗಾಗಿ ಆಗಮಿಸಿದ 200 ಪೊಲೀಸ್‌ ಸಿಬ್ಬಂದಿ
Published 30 ಜೂನ್ 2023, 13:16 IST
Last Updated 30 ಜೂನ್ 2023, 13:16 IST
ಅಕ್ಷರ ಗಾತ್ರ

ಬಾದಾಮಿ: ‘ಗುರುವಾರ ಗೋಹತ್ಯೆ ಮಾಡಿದ ಎಲ್ಲ ಆರೋಪಿಗಳನ್ನು ಮತ್ತು ಪ್ರಚೋದನೆ ನೀಡಿದವರನ್ನೂ ಬಂಧಿಸಬೇಕು. ಗೋಹತ್ಯೆ ಮಾಡಿದ ಸ್ಥಳದಲ್ಲಿ ಗೋಶಾಲೆ ನಿರ್ಮಿಸಬೇಕು. ಶಾಂತಿ ಭಂಗಕ್ಕೆ ಕಾರಣರಾದ ತಹಶೀಲ್ದಾರರನ್ನು ಅಮಾನತು ಮಾಡಬೇಕು’ ಎಂದು ಒತ್ತಾಯಿಸಿ ಇಲ್ಲಿನ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ಶ್ರೀರಾಮ ಸೇನೆ, ಭಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಮೊದಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ ಪ್ರತಿಭಟನಕಾರರು ನಂತರ ತಹಶೀಲ್ದಾರರಿಗೂ ಮನವಿ ಸಲ್ಲಿಸಿದರು. ‘ಈಗಾಗಲೇ 8 ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರನ್ನು ಪೊಲೀಸರು ಬಂಧಿಸಲಿದ್ದಾರೆ’ ಎಂದು ತಹಶೀಲ್ದಾರ್ ಜೆ.ಬಿ. ಮಜ್ಜಗಿ ತಿಳಿಸಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಪರವಾಗಿ ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಸನ್ನಕುಮಾರ ದೇಸಾಯಿ ಮನವಿ ಪಡೆದು ಈಗಾಗಲೇ ಕೆಲವು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು. ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಿರಿ ಎಂದು ಹೇಳಿದರು.

‘ನಾವು ಶಾಂತಿಯುತವಾಗಿ ಹೋರಾಟ ಮಾಡುತ್ತೇವೆ. ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿಲ್ಲ. ಪೊಲೀಸ್‌ ಅಧಿಕಾರಿಗಳು ಅಪರಾಧಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯಲಿದೆ’ ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.

ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮನವಿಯಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.

ಮಾರುಕಟ್ಟೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ರಸ್ತೆ ಸಾರಿಗೆ ಬಸ್‌ ಮತ್ತು ಖಾಸಗಿ ವಾಹನಗಳು ಎಂದಿನಂತೆ ಸಂಚರಿಸಿದವು. ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬಂದೋಬಸ್ತ್‌ಗಾಗಿ 200ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಆಗಮಿಸಿದ್ದಾರೆ. ಎಲ್ಲ ಸ್ಥಳಗಳಲ್ಲಿ ಪೋಲಿಸರು ಪಹರೆ ನಡೆಸಿದ್ದಾರೆ.

ಬಾದಾಮಿ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು.
ಬಾದಾಮಿ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು.

ಎಂಟು ಆರೋಪಿಗಳ ಬಂಧನ

724 ಕೆ.ಜಿ ಮಾಂಸ ವಶ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನಾ ಸ್ಥಳದಲ್ಲಿ 724 ಕೆ.ಜಿ ತೂಕದ ಗೋಮಾಂಸ ಮಾಂಸ ತುಂಬಿದ 34 ಗೊಬ್ಬರದ ಚೀಲಗಳು ಮತ್ತು ಕುತ್ತಿಗೆ ಕೊಯ್ದ ಒಂದು ಎತ್ತು ಒಟ್ಟು ₹ 3.65 ಲಕ್ಷ ಮಾಲ್ಯದ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪಿಎಸ್ಐ ನಿಂಗಪ್ಪ ಪೂಜೇರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪರಾರಿಯಾದ ಇನ್ನೂ ಕೆಲವರನ್ನು ಬಂಧಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT