ಬೀಳಗಿ: ನಾವು ಮಾಡುವ ಸತ್ಕಾರ್ಯ ಹಾಗೂ ಸಾಧನೆಗಳಿಂದ ಜನರು ನಮ್ಮನ್ನು ಗುರುತಿಸುವಂತಾಗಬೇಕು. ಈ ನಿಟ್ಟಿನಲ್ಲಿ ವೈದ್ಯರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಸದಾಕಾಲವೂ ಜನ ಮೆಚ್ಚುವಂತೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಶಾಸಕ ಜೆ. ಟಿ. ಪಾಟೀಲ ಹೇಳಿದರು.

ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಾಗಲಕೋಟೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಂಜಿನಿಯರಿಂಗ್ ಘಟಕ ಬೆಂಗಳೂರು ಇವರ ಸಹಯೋಗದಲ್ಲಿ ಶುಕ್ರವಾರ ನೂತನವಾಗಿ ನಿರ್ಮಿಸಿದ ಸಾರ್ವಜನಿಕ ಆರೋಗ್ಯ ಘಟಕ, ಪ್ರಯೋಗಾಲಯ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಹೊರರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಬೀಳಗಿ ತಾಲ್ಲೂಕು ಆಸ್ಪತ್ರೆಯ ವೈದ್ಯರ, ಕಾರ್ಯ ಶ್ಲಾಘನೀಯ. ವೈದ್ಯರೊಂದಿಗೆ ದಾದಿಯರ, ಆಶಾ ಕಾರ್ಯಕರ್ತೆಯರ ಪಾತ್ರವು ಪ್ರಮುಖವಾಗಿದೆ ಎಂದ ಅವರು ಆರೋಗ್ಯ ಮತ್ತು ನೆಮ್ಮದಿ ಮನುಷ್ಯನ ನಿಜವಾದ ಸಂಪತ್ತು ಎಂದರು.

ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ, ಜಿಲ್ಲಾ ಆರೋಗ್ಯಾಧಿಕಾರಿ ಮಂಜುನಾಥ ಡಿ.ಎನ್ ಮಾತನಾಡಿ, ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ಮುಖ್ಯ ವೈದ್ಯಾಧಿಕಾರಿ ಎಸ್.ಟಿ.ತೇಲಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ವಿ.ಆರ್. ಹಿರೇನಿಂಗಪ್ಪನವರ ನಿರೂಪಿಸಿದರು.

ತಹಶೀಲ್ದಾರ್ ವಿನೋದ ಹತ್ತಳ್ಳಿ, ಇಒ ಶ್ರೀನಿವಾಸ ಪಾಟೀಲ, ತಾಲ್ಲೂಕು ಆರೋಗ್ಯಾಧಿಕಾರಿ ಅನೀಲ ಬದನೂರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದೇವಿಂದ್ರ ಧನಪಾಲ, ಆರೋಗ್ಯ ಸಮಿತಿ ಸದಸ್ಯರಾದ ಮಹಾದೇವ ಬೊರ್ಜಿ, ಸಿದ್ದು ಸಾರಾವರಿ, ಸುಭಾಷ ಮೆರಾಕಾರ, ಶ್ರೀಕಾಂತ ತಳವಾರ, ಜ್ಯೋತಿ ಬೆನ್ನಳ್ಳಿ, ಮನೋಜ ಹಾದಿಮನಿ, ಡೊಂಗ್ರಿಸಾಬ ಕೊಟೆಕಾನ,ತಾಲ್ಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.