ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PU Result | ಬಾಗಲಕೋಟೆ: ದರ್ಶನ ತೇರದಾಳ ರಾಜ್ಯಕ್ಕೆ 8, ಜಿಲ್ಲೆಗೆ ಪ್ರಥಮ ಸ್ಥಾನ

Published 10 ಏಪ್ರಿಲ್ 2024, 14:38 IST
Last Updated 10 ಏಪ್ರಿಲ್ 2024, 14:38 IST
ಅಕ್ಷರ ಗಾತ್ರ

ರಬಕವಿ ಬನಹಟ್ಟಿ: ಸಮೀಪದ ಯಲ್ಲಟ್ಟಿಯ ಕೊಣ‍್ಣೂರ ವಿಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ದರ್ಶನ ಪಾರಿಸನಾಥ ತೇರದಾಳ ಪಿಯು ದ್ವಿತೀಯ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 591 ಅಂಕಗಳನ್ನು ಪಡೆದು, ರಾಜ್ಯಕ್ಕೆ 8 ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ದರ್ಶನ ಕನ್ನಡ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳಲ್ಲಿ 100 ಕ್ಕೆ 100, ಇಂಗ್ಲಿಷ್:94, ಮತ್ತು ಭೌತ ವಿಜ್ಞಾನ ವಿಷಯದಲ್ಲಿ 97 ಅಂಕಗಳನ್ನು ಪಡೆದುಕೊಂಡಿದ್ದಾನೆ.

ರಾಯಬಾಗ ತಾಲ್ಲೂಕಿನ ಯಲ್ಪಾರಟ್ಟಿ ಗ್ರಾಮದವರಾದ ದರ್ಶನರ ತಂದೆ ತಾಯಿ ಕೃಷಿಕರು. ದರ್ಶನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಶೇ 97.76 ರಷ್ಟು ಅಂಕ ಗಳಿಸಿದ್ದ.

‘ಕಾಲೇಜು ಅವಧಿಯ ನಂತರ ದಿನಾಲೂ ಆರೇಳು ಗಂಟೆಗಳ ಕಾಲ ಓದುತ್ತಿದ್ದೆ, ಮುಂದೆ ವೈದ್ಯಕೀಯ ಪದವಿಯನ್ನು ಪಡೆದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವೆ’ ಎಂದು ದರ್ಶನ ಪತ್ರಿಕೆಗೆ ತಿಳಿಸಿದರು.

‘ವಿದ್ಯಾರ್ಥಿಗಳ ಶ್ರಮದೊಂದಿಗೆ ಕಾಲೇಜು ಉಪನ್ಯಾಸಕರ ಸತತ ಪ್ರಯತ್ನದಿಂದ ಕಾಲೇಜಿನ ವಿದ್ಯಾರ್ಥಿ ದರ್ಶನ ರಾಜ್ಯ ಮಟ್ಟದಲ್ಲಿ 8 ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ’ ಎಂದು ಪ್ರಾಚಾರ್ಯ ಬಸವರಾಜ ಕೊಣ‍್ಣೂರ ತಿಳಿಸಿದರು.

ಆಡಳಿತಾಧಿಕಾರಿ ಶೀತಲ ಕೊಣ್ಣೂರ, ಉಪ ಪ್ರಾಚಾರ್ಯ ಕಂದಗಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT