ಬಾಗಲಕೋಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಅಭಿಪ್ರಾಯಪಟ್ಟರು.

ನಗರದಲ್ಲಿ ಇತ್ತೀಚೆಗೆ ನಡೆದ ಸಹನಾ ಶಿಕ್ಷಣ ಸಂಸ್ಥೆಯ ಅರುಂಧತಿ ಇಂಗ್ಲಿಷ್ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣದ ಜೊತೆಗೆ ಈ ಸಂಸ್ಥೆ ಶೈಕ್ಷಣಿಕ ವಾತಾವರಣ ವೃದ್ಧಿಸುವ ಸುಸಜ್ಜಿತ ಕಟ್ಟಡ ಹೊಂದಿರುವುದು ಆಶಾದಾಯಕ ಬೆಳವಣಿಗೆ ಎಂದರು.

ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಮಾತನಾಡಿ, ಶಿಸ್ತು, ಗುಣಮಟ್ಟದ ಶಿಕ್ಷಣ ನೀಡುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ ಎಂದು ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ನಿಜಲಿಂಗಪ್ಪ ಮಟ್ಟಿಹಾಳ ಮಾತನಾಡಿ, ಮಕ್ಕಳ ಭವಿಷ್ಯಕ್ಕೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಅಷ್ಟೇ ಅಗತ್ಯ ಎಂದರು.

ಸಂಸ್ಥೆಯ ಸಂಸ್ಥಾಪಕ ಲಕ್ಷ್ಮಣ ಯಂಕಂಚಿ ಅವರು, ಸಂಸ್ಥೆ ಬೆಳೆದು ಬಂದ ಯಶೋಗಾಥೆ, ಪಟ್ಟ ಶ್ರಮ, ಉದ್ದೇಶಗಳನ್ನು ವಿವರಿಸಿದರು.

ಹಂಪಿ ಮಾತಂಗ ಪೀಠದ ಪೂರ್ಣಾನಂದ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆ ಅಧ್ಯಕ್ಷೆ ಚಂದ್ರಮ್ಮ ಯಂಕಂಚಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಉಮೇಶ ಕಾರಜೋಳ, ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣವರ, ಜಿಲ್ಲಾಸ್ಪತ್ರೆ ಸಹಾಯಕ ಆಡಳಿತಾಧಿಕಾರಿ ಎಚ್.ವಿ. ಲಿಂಗಣ್ಣವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.