ರಬಕವಿ ಬನಹಟ್ಟಿ: ನಮ್ಮ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನತೆಯ ಕಲ್ಯಾಣಕ್ಕಾಗಿ ಸದಾ ಬದ್ಧವಾಗಿದೆ. ರಬಕವಿಯಲ್ಲಿ ನಿರ್ಮಾಣಗೊಂಡಿರುವ 384 ಮನೆಗಳ ವಿತರಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳನ್ನು ವಸತಿ ರಹಿತ ಜನರಿಗೆ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದರು.

ಅವರು ಶನಿವಾರ ರಬಕವಿಯ ಆಶ್ರಯ ಕಾಲೊನಿಯ ಹತ್ತಿರದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ನಿರ್ಮಾಣ ಮಾಡಿದ 384 ಮನೆಗಳನ್ನು ವಿತರಣೆ ಮಾಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಡವರು ಹಾಗೂ ದಲಿತರ ಆರ್ಥಿಕ ಸ್ಥಿತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಅವರು ತಿಳಿಸಿದರು.

ತೇರದಾಳ ಶಾಸಕ ಸಿದ್ದು ಸವದಿ ಮಾತನಾಡಿ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ ಯೋಜನೆ ಅಡಿಯಲ್ಲಿ ಪ್ರಧಾನಿ ಮೋದಿಯವರ ವಿಶೇಷ ಆಸಕ್ತಿಯಿಂದಾಗಿ ದೇಶದ ಎಲ್ಲ ಕಡೆಗೆ ವಸತಿ ರಹಿತರಿಗೆ ಮನೆಗಳನ್ನು ನೀಡಲಾಗುತ್ತಿದೆ. ಇಲ್ಲಿರುವ ಎಲ್ಲ ಮನೆಗಳು ಗುಣಮಟ್ಟದಿಂದ ಕೂಡಿವೆ. ಯಾವುದೇ ಆತಂಕ ಇಲ್ಲದೆ ಒನ್ ಪ್ಲಸ್ ಯೋಜನೆಯ ಅಡಿಯಲ್ಲಿ ನಿರ್ಮಾಣಗೊಂಡ ಮನೆಗಳಲ್ಲಿ ವಾಸ ಮಾಡಬಹುದಾಗಿದೆ ಎಂದರು.

ಜಮಖಂಡಿ ಶಾಸಕ ಜಗದೀಶ ಗುಡಗುಂಟಿಮಠ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರ ಸಂಗಪ್ಪ, ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್, ತಹಶೀಲ್ದಾರ್ ಗಿರೀಶ ಸ್ವಾದಿ, ಪೌರಾಯುಕ್ತ ರಮೇಶ ಜಾಧವ, ಡಾ.ಎ.ಆರ್.ಬೆಳಗಲಿ, ನಗರಸಭೆಯ ಮಾಜಿ ಸದಸ್ಯ ಸಂಜಯ ತೆಗ್ಗಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.