ರಬಕವಿ ಬನಹಟ್ಟಿ: ‘ಇಂದಿನ ದಿನಗಳಲ್ಲಿ ಸಹಕಾರಿ ರಂಗವು ಪ್ರತಿಯೊಂದು ಕ್ಷೇತ್ರದಲ್ಲಿಯೂ ಪಾದಾರ್ಪಣೆ ಮಾಡಿದೆ. ದೇಶದ ಅಭಿವೃದ್ಧಿಯಲ್ಲಿ ಸಹಕಾರಿ ರಂಗದ ಕೊಡುಗೆ ಅಪಾರವಾಗಿದೆ’ ಎಂದು ಹಳೇ ಹುಬ್ಬಳ್ಳಿಯ ವೀರಭಿಕ್ಷಾವರ್ತಿ ಮಠದ ಜಗದ್ಗುರು ಶಿವಶಂಕರ ಶಿವಾಚಾರ್ಯರು ತಿಳಿಸಿದರು.

ಇಲ್ಲಿನ ಲಕ್ಷ್ಮಿ ನಗರದ ಬಡಾವಣೆಯಲ್ಲಿ ಸೋಮವಾರ ಕುರುಹಿನಶೆಟ್ಟಿ ಅರ್ಬನ್ ಕ್ರೆಡಿಟ್ ಸೊಸೈಟಿಯ ಸ್ಥಳೀಯ ಶಾಖೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ದಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಕೀರ್ತಿ ಗಣೇಶ ಮಾತನಾಡಿ, ‘ಗ್ರಾಮೀಣ ಜನರ ಅಭಿವೃದ್ಧಿಗೆ ಸಹಕಾರಿ ಬ್ಯಾಂಕ್ಗಳು ಶ್ರಮಿಸುತ್ತಿವೆ. ಸಹಕಾರಿ ಸಂಘಗಳು ಡಿಜಿಟಲೀಕರಣದತ್ತ ಗಮನ ನೀಡಬೇಕು’ ಎಂದರು.

ಬನಹಟ್ಟಿಯ ಹಿರೇಮಠದ ಶರಣಬಸವ ಶಿವಾಚಾರ್ಯರು ಮಾತನಾಡಿ, ‘ಸಂಘದ ಅಭಿವೃದ್ಧಿಯಲ್ಲಿ ನಿರ್ದೇಶಕ ಮಂಡಳಿ, ಸಿಬ್ಬಂದಿ ವರ್ಗ ಮತ್ತು ಸದಸ್ಯರ ಸಹಕಾರ ಮುಖ್ಯವಾಗಿದೆ’ ಎಂದು ತಿಳಿಸಿದರು.

ರನ್ನ ಬೆಳಗಲಿಯ ಸಿದ್ಧರಾಮ ಶಿವಯೋಗಿಗಳು ಸಾನ್ನಿಧ್ಯ ವಹಿಸಿದ್ದರು. ಸಂಘದ ಅಧ್ಯಕ್ಷ ಸುಭಾಸ ಬೆಳಕೋಡ ಅಧ್ಯಕ್ಷತೆ ವಹಿಸಿದ್ದರು. ಧರೆಪ್ಪ ಉಳ್ಳಾಗಡ್ಡಿ, ಸಂಜಯ ವಸ್ತ್ರದ, ಶ್ರೀಶೈಲ ಧಬಾಡಿ, ವಿದ್ಯಾ ಧಬಾಡಿ, ದಾನಪ್ಪ ಹುಲಜತ್ತಿ, ಗೋವಿಂದ ಲಡ್ಡಾ, ಬಸವರಾಜ ಗಿಡದಾನಪ್ಪಗೋಳ, ಈಶ್ವರ ಪಟಗುಂಡಿ, ಹುಮಾಯೂನ್ ಮುಲ್ಲಾ, ಗಂಗಪ್ಪ ಮಂಟೂರ, ಸುರೇಶ ಚಿಂಡಕ, ಮಲ್ಲಿಕಾರ್ಜುನ ತುಂಗಳ, ಗಂಗಪ್ಪ ಮುಗತಿ ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-19-461350204

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.