ರಬಕವಿ ಬನಹಟ್ಟಿ: ‘ಈ ತಿಂಗಳ ಆರಂಭದಿಂದಲೇ ಪಡಿತರ ವಿತರಣೆಯ ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಉಂಟಾಗಿದ್ದು, ಸಾರ್ವಜನಿಕರಿಗೆ ಮತ್ತು ಪಡಿತರ ವಿತರಕರಿಗೆ ತೊಂದರೆಯಾಗಿದೆ, ಈ ಕುರಿತು ಸರ್ಕಾರದ ಗಮನ ಸೆಳೆಯಬೇಕು’ ಎಂದು ಪಡಿತರ ವಿತರಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶೇಖರ ಅಂಗಡಿ ಆಗ್ರಹಿಸಿದರು.

‘ಪಡಿತರ ವಿತರಣೆಯ ಸಂದರ್ಭದಲ್ಲಿ ಒಬ್ಬ ಪಡಿತರದಾರರಿಂದ ಎರೆಡುರಡು ಬಾರಿ ಬೆರಳಚ್ಚು ಪಡೆಯಬೇಕಾಗಿದೆ. ಇದರಿಂದ ಸಮಯ ವ್ಯರ್ಥವಾಗುತ್ತಿದೆ’ ಎಂದರು.

‘ಮುಂದಿನ ತಿಂಗಳಿನಿಂದ ಕೇವಲ ಒಂದು ಬಾರಿ ಬೆರಳಚ್ಚು ಪಡೆಯುವ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ನ್ಯಾಯ ಬೆಲೆ ಅಂಗಡಿಗಳಲ್ಲಿಯ ತಾಂತ್ರಿಕ ಸಮಸ್ಯೆಯನ್ನು ಆದಷ್ಟು ಬೇಗ ನಿವಾರಣೆ ಮಾಡಬೇಕು’ ಎಂದು ಸಂಘದ ಸದಸ್ಯರು ತಿಳಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್ ಗಿರೀಶ ಸ್ವಾದಿ ಮಾತನಾಡಿ, ‘ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಮತ್ತು ಸರ್ವರ್ ಸಮಸ್ಯೆಯ ಕುರಿತು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗಜನಾನ ನಾಗರಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-19-1224456041

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.