ಶುಕ್ರವಾರ, ನವೆಂಬರ್ 27, 2020
22 °C

ರಬಕವಿ: ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಜಿಲ್ಲೆಯ ರಬಕವಿಯ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ ಉಮಾಶ್ರೀ ಅವರ ನಿವಾಸದಲ್ಲಿ ಭಾನುವಾರ ತಡರಾತ್ರಿ ಕಳ್ಳತನ ನಡೆದಿದೆ.

ಉಮಾಶ್ರೀ ಬೆಂಗಳೂರಿನ ಅರ್.ಆರ್.ನಗರ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಹೀಗಾಗಿ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದರು.

ಮನೆಯಲ್ಲಿ ಪೀಠೋಪಕರಣ, ದಿನ ಬಳಕೆಯ ವಸ್ತುಗಳು ಬಿಟ್ಟರೆ ಬೆಲೆ ಬಾಳುವ ವಸ್ತುಗಳು ಏನೂ ಇರಲಿಲ್ಲ. ಚಿನ್ನಾಭರಣ, ನಗದು ಕೂಡ ಇಟ್ಟಿರಲಿಲ್ಲ ಎಂದು ಉಮಾಶ್ರೀ ಪ್ರಜಾವಾಣಿಗೆ ತಿಳಿಸಿದರು.

ಕಳ್ಳತನವಾಗಿದೆ ಎಂದು ನಮ್ಮ ಹುಡುಗರು ಹೇಳಿದ್ದಾರೆ. ಆದರೆ, ಕಳ್ಳರು ಏನೇನು ಒಯ್ದಿದ್ದಾರೆ ಎಂದು ಗೊತ್ತಿಲ್ಲ. ಬೆಂಗಳೂರಿನಿಂದ ಹೊರಟಿದ್ದೇನೆ. ಸಂಜೆ ತಲುಪಲಿದ್ದೇನೆ ಎಂದು ಹೇಳಿದರು.

ತಡರಾತ್ರಿ ಮನೆ ಬೀಗ ಒಡೆದು ಕಳ್ಳರು ಒಳಗೆ ನುಗ್ಗಿದ್ದಾರೆ. ಮನೆಯೊಳಗಿನ ಟ್ರಿಜರಿ ಒಡೆದಿದ್ದಾರೆ ಎಂದು ತಿಳಿದುಬಂದಿದೆ.

ತೇರದಾಳ ಠಾಣೆ ಪೋಲಿಸರ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು