ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುಳೇದಗುಡ್ಡ | ಸಿಡಿಲು ಬಡಿದು ಆಕಳು ಸಾವು

Published 14 ಏಪ್ರಿಲ್ 2024, 16:14 IST
Last Updated 14 ಏಪ್ರಿಲ್ 2024, 16:14 IST
ಅಕ್ಷರ ಗಾತ್ರ

ಗುಳೇದಗುಡ್ಡ: ತಾಲ್ಲೂಕಿನ ಹಂಸನೂರ ಗ್ರಾಮದಲ್ಲಿ ಶುಕ್ರವಾರ ಸುರಿದ ಗುಡುಗು ಸಹಿತ ಭಾರಿ ಮಳೆಗೆ ಆಕಳೊಂದು ಮೃತಪಟ್ಟಿದೆ.

ಹಂಸನೂರ ಗ್ರಾಮದ ಮೂರ್ತೆಪ್ಪ ಅಮೃತಪ್ಪ ವಾಲಿಕಾರ ಎಂಬುವರು ತಮ್ಮ ಮನೆಯ ಪಕ್ಕದ ಶೆಡ್‍ನಲ್ಲಿ ಕಟ್ಟಿದ್ದ ಆಕಳಿಗೆ ಸಿಡಿಲು ಬಡಿದಿದ್ದು, ಸಿಡಿಲಿನ ರಭಸಕ್ಕೆ ಆಕಳು ಮೃತಪಟ್ಟಿದೆ.

ಸ್ಥಳಕ್ಕೆ ಗ್ರಾಮ ಆಡಳಿತ ಅಧಿಕಾರಿ ಎಂ.ಎಸ್.ಗುಡಿಸಾಗರ, ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಪಿ.ವಿ.ಜಾಧವ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು.

ತಾಲ್ಲೂಕಿನ ಕೊಂಕಣಕೊಪ್ಪ ಗ್ರಾಮದಲ್ಲಿ ಶುಕ್ರವಾರ ಭಾರಿ ಗಾಳಿ ಬಿಸಿದ್ದರಿಂದ ಹನಮಂತ ಯರಗೊಪ್ಪ ಎಂಬುವರು 1 ಎಕರೆ 20 ಗುಂಟೆ ಜಮೀನಿನಲ್ಲಿ ಬೆಳೆದ ಬಾಳೆ ಬೆಳೆ ಸಂಪೂರ್ಣ ನೆಲಕಚ್ಚಿದೆ. ಸ್ಥಳಕ್ಕೆ ಗ್ರಾಮ ಆಡಳಿತ ಅಧಿಕಾರಿ ಎಂ.ಎಸ್.ಗುಡಿಸಾಗರ ಹಾನಿಯಾದ ಬೆಳೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ರೈತರು ಆಕಳು ಮತ್ತು ಬಾಳೆ ಬೆಳೆ ಹಾಳಾದ್ದರಿಂದ ಪರಿಹಾರಕ್ಕಾಗಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT