ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ | ಸತತ ಮಳೆ: ಜೋಳದ ಬಿತ್ತನೆಗೆ ಅಡ್ಡಿ

ಅಕ್ಟೋಬರ್ ತಿಂಗಳಲ್ಲಿ ವಾಡಿಕೆಯಷ್ಟು ಮಳೆ, 98 ಸಾವಿರ ಹೆಕ್ಟೇರ್‌ ಪ್ರದೇಶ ಬಿತ್ತನೆ ಗುರಿ
Published : 17 ಅಕ್ಟೋಬರ್ 2024, 5:12 IST
Last Updated : 17 ಅಕ್ಟೋಬರ್ 2024, 5:12 IST
ಫಾಲೋ ಮಾಡಿ
Comments
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವು ದರಿಂದ ಮುಂದಿನ ಮೂರ್ನಾಲ್ಕು ದಿನ ಸಾಧಾರಣದಿಂದ ಜೋರಾದ ಮಳೆಯಾಗುವ ಸಾಧ್ಯತೆ ಇದೆ
ಬಸವರಾಜ ನಾಗಲೀಕರ,ಹವಾಮಾನ ತಜ್ಞ, ಕೃಷಿ ವಿಜ್ಞಾನ ಕೇಂದ್ರ
ಬಾಗಲಕೋಟೆ ಸೇರಿದಂತೆ ವಿವಿಧೆಡೆ ಮಳೆ
ಬಾಗಲಕೋಟೆ: ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಸತತ ಎರಡನೇ ದಿನವೂ ಮಳೆ ಮುಂದುವರೆದಿದೆ. ಬಾಗಲಕೋಟೆ, ಬಾದಾಮಿ, ಹುನಗುಂದ, ಇಳಕಲ್‌, ಬೀಳಗಿ, ಕುಳಗೇರಿ, ಮುಧೋಳ, ಮಹಾಲಿಂಗಪುರ ಸೇರಿದಂತೆ ಎಲ್ಲೆಡೆ ಮಳೆಯಾಗಿದೆ. ನವಿಲುತೀರ್ಥ ಜಲಾಶಯ ಭರ್ತಿಯಾಗಿರುವುದರಿಂದ 8 ಸಾವಿರ ಕ್ಯುಸೆಕ್‌ ನೀರು ಹೊರ ಬಿಡಲಾಗಿದೆ. ಬೆಣ್ಣೆ ಹಳ್ಳ ಹರಿಯುವ ಪ್ರದೇಶದ ಹುಬ್ಬಳ್ಳಿ–ಧಾರವಾಡದಲ್ಲಿಯೂ ಮಳೆಯಾಗುತ್ತಿರುವುದರಿಂದ ಮಲಪ್ರಭಾ ನದಿ ನೀರು ಈಗಾಗಲೇ ಬೆಳೆಗಳಿಗೆ ನುಗ್ಗಿದೆ. ಇನ್ನಷ್ಟು ಮಳೆ ಹೆಚ್ಚಾದರೆ, ಗ್ರಾಮಗಳಿಗೂ ನೀರು ನುಗ್ಗುವ ಅಪಾಯವಿದೆ.
ಹಿಂಗಾರು ಬಿತ್ತನೆಗೆ ಮಳೆ ಅಡ್ಡಿ: ಆತಂಕ
ಹುನಗುಂದ: ಪಟ್ಟಣವು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಜೋರು ಮಳೆ ಆಗಿದೆ. ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ಆರಂಭವಾದ ಮಳೆ, ತಾಲ್ಲೂಕಿನ ನಾಗೂರು, ಯಡಹಳ್ಳಿ, ಚಿತ್ತವಾಡಗಿ, ವೀರಾಪೂರ, ಬನ್ನಿಹಟ್ಟಿ, ಹೊನ್ನರಹಳ್ಳಿ, ಬೇವಿನಮಟ್ಟಿ, ಹಿರೇಬಾದವಾಡಗಿ, ಚಿಕ್ಕಬಾದವಾಡಗಿ ಸೇರಿದಂತೆ ಇತರೆ ಗ್ರಾಮಗಳಲ್ಲಿ ಮಳೆ ಅಬ್ಬರಿಸಿದೆ. ಮಳೆ ಅಬ್ಬರಕ್ಕೆ ಹೊಲಗಳಲ್ಲಿನ ಬದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಕೆಲ ಪ್ರದೇಶಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಮಳೆ ಸುರಿಯುತ್ತಿದೆ. ಹಿಂಗಾರು ಬೆಳೆಗಳಾದ ಜೋಳ, ಕಡಲೆ ಬಿತ್ತನೆಗೆ ಮಳೆ ಅಡ್ಡಿಯಾಗಬಹುದು ಎಂಬ ಆತಂಕ ರೈತರನ್ನು ಕಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT