ಬಾಗಲಕೋಟೆ: ಕೇಂದ್ರದಲ್ಲಿ ಒಂಬತ್ತು ವರ್ಷಗಳಿಂದ ಬಿಜೆಪಿ ಸರ್ಕಾರವಿದೆ. ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸಂಕಷ್ಟ ಸೂತ್ರ ಕಂಡು ಹಿಡಿಯಲಿಲ್ಲ. ರಾಜ್ಯದ ಬಿಜೆಪಿ ನಾಯಕರು ನೀರಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟೀಕಿಸಿದರು.
ಭಾನುವಾರ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ಸಂಬಂಧಿಸಿದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲಿ ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ನಡೆದಿರುವ ಹೋರಾಟ ರಾಜ್ಯ ಸರ್ಕಾರದ ವಿರುದ್ಧವಲ್ಲ. ಪ್ರಾಧಿಕಾರ ಮಾಡಿದ್ದು ಯಾರು? ನೀರು ಬಿಡಲು ಸೂಚಿಸುತ್ತಿರುವವರು ಯಾರು ಎಂಬುದು ಜನರಿಗೆ ಗೊತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳ ಜತೆಗೆ ಬರಗಾಲವನ್ನೂ ಎದುರಿಸುತ್ತೇವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ₹120 ಲಕ್ಷ ಕೋಟಿ ಸಾಲ ಮಾಡಿದೆ. ಇದು ಅಭಿವೃದ್ಧಿಯೇ ಎಂದು ಪ್ರಶ್ನಿಸಿದರು.
ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ನಡೆದುಕೊಂಡು ಹೋಗಲಿ. ಮೂವರು ಡಿಸಿಎಂ ಸ್ಥಾನ ಬೇಕು ಎಂದು ಮಾತನಾಡುವುದು ಅನವಶ್ಯಕ. ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಬೆಂಗಳೂರು ಬಂದ್ ದಿನ ಬಸ್ ಸಂಚಾರದ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಬಂದ್ ಸ್ವರೂಪ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.