ಶುಕ್ರವಾರ, ಸೆಪ್ಟೆಂಬರ್ 17, 2021
29 °C

ದೇವೇಗೌಡರ ನೆರವು ಕೇಳುವ ಬದಲು ಚುನಾವಣೆಗೆ ಹೋಗಿ: ಸಿಎಂಗೆ ಆರ್.ಬಿ.ತಿಮ್ಮಾಪುರ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರ್.ಬಿ.ತಿಮ್ಮಾಪುರ

ಬಾಗಲಕೋಟೆ: ಬಸವರಾಜ ಬೊಮ್ಮಾಯಿ ಅವರದ್ದು ಅತಂತ್ರ ಸರ್ಕಾರ. ದೇವೇಗೌಡರ ನೆರವು ಕೋರುವ ಬದಲು ಬಿಜೆಪಿಯವರು ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋಗುವುದು ಸೂಕ್ತ ಎಂದು ವಿಧಾನಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಬದಲಾದರೂ ಭ್ರಷ್ಟಾಚಾರದ ವಾಸನೆಯಿಂದ ಈ ಸರ್ಕಾರ ಮುಕ್ತವಾಗುವುದಿಲ್ಲ‌ ಅದೇನಿದ್ದರೂ ಹಳೆಯ ಬಾಟಲಿಯಲ್ಲಿ ಹೊಸ ಮದ್ಯ ಹಾಕಿದಂತಾಗಿದೆ ಎಂದರು.

ನಾಲ್ಕಾರು ಗುಂಪುಗಳಿಂದ ಕೂಡಿರುವ ಈ ಸರ್ಕಾರಕ್ಕೆ ಬಹಳ ದಿನ ಭವಿಷ್ಯವೂ ಇಲ್ಲ. ಅತಂತ್ರ ಸರ್ಕಾರಕ್ಕೆ ಒಳ್ಳೆಯ ಆಡಳಿತ ಕೊಡಲು ಆಗುವುದಿಲ್ಲ. ಹೀಗಾಗಿ ಚುನಾವಣೆಗೆ ಹೋಗುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮಾಜಿ ಪ್ರಧಾನಿ ದೇವೇಗೌಡರ ಬಲ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು