ರಾಂಪುರ: ಸ್ಥಳೀಯ ಬಸ್ ನಿಲ್ದಾಣದ ಜಾಗ ಅತಿಕ್ರಮಣದಾರರಿಗೆ ಮತ್ತೆ ನೋಟಿಸ್ ನೀಡಲು ಬುಧವಾರ ಬಾಗಲಕೋಟೆಯಲ್ಲಿ ನಡೆದ ಅಧಿಕಾರಿಗಳ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ.

ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸದ್ಯದಲ್ಲೇ ಪುನರ್ವಸತಿ ಇಲಾಖೆಯ ಅಧಿಕಾರಿಗಳು ಎರಡನೇ ನೋಟಿಸ್ ಜಾರಿ ಮಾಡಲಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾವಿ ತಿಳಿಸಿದರು.

ನಿಗದಿಗೊಳಿಸಲಾದ ಜಾಗದ ಅತಿಕ್ರಮಣದಿಂದಾಗಿ ಬಸ್ ನಿಲ್ದಾಣ ನಿರ್ಮಾಣ ಕಾರ್ಯ 5-6 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅತಿಕ್ರಮಣದಾರರು ಜಾಗ ತೆರವುಗೊಳಿಸದ ಹಿನ್ನೆಲೆಯಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.

ಸದ್ಯ ಎರಡನೇ ನೋಟಿಸ್ ಜಾರಿಗೊಳಿಸಿ ತಿಳಿವಳಿಕೆ ನೀಡುವುದು, ನಂತರ ಮೂರನೇ ಬಾರಿ ನೋಟಿಸ್ ಜಾರಿ ಮಾಡುವುದಕ್ಕೆ ತೀರ್ಮಾನವಾಗಿದ್ದು, ಇದಕ್ಕೆ ಸ್ಪಂದಿಸಿ ಅತಿಕ್ರಮಣದಾರರು ಸ್ಥಳ ತೆರವುಗೊಳಿಸಿದರೆ ಸರಿ. ಇಲ್ಲದಿದ್ದರೆ ಮುಂದಿನ ಕ್ರಮ ಜರುಗಿಸಲು ನಿರ್ಧರಿಸಲಾಗಿದೆ ಎಂದು ಇಒ ತಿಳಿಸಿದರು.

ಅತಿಕ್ರಮಣ ತೆರವುಗೊಳಿಸುವಂತೆ ಕೋರಿ ಸಾರ್ವಜನಿಕರೊಬ್ಬರು ಬಾಗಲಕೋಟೆ ಲೋಕಾಯುಕ್ತ ಪೋಲಿಸರಿಗೆ ದೂರು ಸಲ್ಲಿಸಿದ್ದು, ಅವರು ಈ ಸಮಸ್ಯೆ ಪರಿಹರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಇಲಾಖೆ, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಇಒ ಮತ್ತು ಮತ್ತು ರಾಂಪುರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.