ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ| ಭ್ರೂಣಹತ್ಯೆ ತಡೆಗೆ ಕ್ಷಿಪ್ರ ಕಾರ್ಯ ಪಡೆ: ಜಿಲ್ಲಾಧಿಕಾರಿ

Published 8 ಜೂನ್ 2024, 0:09 IST
Last Updated 8 ಜೂನ್ 2024, 0:09 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರದಲ್ಲಿ ನಡೆದ ಭ್ರೂಣಹತ್ಯೆ ಪ್ರಕರಣ ಮರುಕಳಿಸದಂತೆ ತಡೆಯಲು ಪ್ರಮುಖ ಅಧಿಕಾರಿಗಳಿರುವ ಕ್ಷಿಪ್ರ ಕಾರ್ಯ ಪಡೆ ರಚಿಸಲಾಗಿದೆ.

‘ಜಿಲ್ಲಾ ಮಟ್ಟದ ಹಾಗೂ ಉಪವಿಭಾಗದ ಸಮಿತಿಗಳ ಜೊತೆ ಸಮನ್ವಯ ಮಾಡಿಕೊಂಡು ಭ್ರೂಣ ಹತ್ಯೆ ಪ್ರಕರಣಗಳನ್ನು ಪತ್ತೆ ಮಾಡಬೇಕು. ಗರ್ಭಪೂರ್ವ ಮತ್ತು ಪ್ರಸವಪೂರ್ವ ಪತ್ತೆ ಮಾಡುವ (ಲಿಂಗ ಆಯ್ಕೆ ನಿಷೇಧ) ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಪಡೆ ರಚನೆಯಾಗಿದೆ’ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ.ತಿಳಿಸಿದ್ದಾರೆ.

ಪೊಲೀಸ್‌ ಇಲಾಖೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಕಂದಾಯ ಇಲಾಖೆಯ ಉಪವಿಭಾಗಾಧಿಕಾರಿ, ಆರೋಗ್ಯ ಇಲಾಖೆಯ ಡಿಎಚ್ಒ, ಪಿ.ಸಿ ಆ್ಯಂಡ್‌ ಪಿಎನ್‌ಡಿಟಿ ಅಧ್ಯಕ್ಷ, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಕಾರ್ಯಪಡೆಯಲ್ಲಿ ಇದ್ದಾರೆ.

ಡಾ.ಮಲಘಾಣ ವಿರುದ್ಧ ಇಲಾಖೆ ವಿಚಾರಣೆ

ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮುಧೋಳ ತಾಲ್ಲೂಕಿನ ವೈದ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ ವಿರುದ್ಧ ಇಲಾಖೆ ವಿಚಾರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್‌ ಅವರಿಗೆ ಶಿಫಾರಸು ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT