ಗುರುವಾರ , ಜುಲೈ 7, 2022
23 °C

ಪಡಿತರ ಅಕ್ಕಿ ಅಕ್ರಮ ಸಾಗಣೆ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆರೂರ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಾದಾಮಿಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಾಗಲಕೋಟೆ ನವನಗರದ ಮಹಮ್ಮದ ಗೌಸ ಹುನಗುಂದ ಮತ್ತು ಅನ್ನಿಸಾ ಅತ್ತಾರ ಬಂಧಿತರು. ₹ 14,865 ಬೆಲೆಯ 675 ಕ್ವಿಂಟಲ್ ಅಕ್ಕಿ ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ. ಪಡಿತರ ಅಕ್ಕಿ ಸಾಗಣೆ ಲೈಸೆನ್ಸ್ ಇದೆ ಎಂದು ಸ್ಥಳೀಯರನ್ನು ನಂಬಿಸಿ ಅವರು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದರು.

ಶಿರಸ್ತೇದಾರ್ ಗುರುಮೂರ್ತಿ ಸಬನಿಸ್ ಮತ್ತು ಮಂಜುನಾಥ ರೊಟ್ಟಿ ದಾಳಿ ನಡೆಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು