ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗೆ ಹೊರಟ ವಿದ್ಯಾರ್ಥಿನಿ ಮೇಲೆ ಹರಿದ ಟ್ರ್ಯಾಕ್ಟರ್

Published 30 ಜನವರಿ 2024, 14:07 IST
Last Updated 30 ಜನವರಿ 2024, 14:07 IST
ಅಕ್ಷರ ಗಾತ್ರ

ರಬಕವಿ ಬನಹಟ್ಟಿ: ಸಮೀಪದ ಯಲ್ಲಟ್ಟಿ ಗ್ರಾಮದಲ್ಲಿ ಮಂಗಳವಾರ ಮನೆಯಿಂದ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಟ್ರ್ಯಾಕ್ಟರ್ ಹಾಯ್ದ ಪರಿಣಾಮ ಶಾಲಾ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. 

ಸಂಸ್ಕೃತಿ ಭಜಂತ್ರಿ (13) ಮೃತ ಬಾಲಕಿ. 

ಗ್ರಾಮದ ರಾಣಿ ಚನ್ನಮ್ಮ ವೃತ್ತದ ಬಳಿ ಬೆಳಿಗ್ಗೆ 9.30ಕ್ಕೆ ಸೈಕಲ್ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರ್ಟಾಕ್ಟರ್ ಚಾಲಕ ವೇಗವಾಗಿ ಬಂದಿದ್ದರಿಂದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದ್ದಾನೆ. ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು  ಹೆಚ್ಚಿನ ಚಿಕಿತ್ಸೆಗೆ ಜಮಖಂಡಿಯಿಂದ ವಿಜಯಪುರಕ್ಕೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾಳೆ.

ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಿಎಸ್ಐ ಶಾಂತಾ ಹಳ್ಳಿ ತನಿಖೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT