ಬಾಗಲಕೋಟೆ: ಮೊಣಕಾಲು, ಕೀಲು ಸಮಸ್ಯೆಗಳನ್ನು ನಿರ್ಲಕ್ಷಿಸದೇ, ಆರಂಭದಲ್ಲಿಯೇ ಲಭ್ಯವಿರುವ ಅತ್ಯಾಧುನಿಕ ಚಿಕಿತ್ಸೆಗಳ ಲಾಭ ಪಡೆದುಕೊಳ್ಳಬೇಕು ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಮೂಳೆಚಿಕಿತ್ಸೆ ಮತ್ತು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಸುನಿಲ್ ಕಿಣಿ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕೀರ್ಣವಾದ ಮೊಣಕಾಲು, ಸೊಂಟದ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಮೆಕೊ ಮತ್ತು ಕ್ಯೂವಿಸ್ನಂತಹ ಮುಂದುವರಿದ ತಂತ್ರಜ್ಞಾನದ ರೋಬೋಟಿಕ್ ಚಾಲಿತ ಜಾಯಿಂಟ್ ರಿಪ್ಲೇಸ್ಮೆಂಟ್ ವ್ಯವಸ್ಥೆಗಳಿವೆ ಎಂದರು.

ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆ ಎರಡೂವರೆ ವರಷಗಳಿಂದ ರೋಬೋಟಿಕ್ ಚಾಲಿತ ಮೊಣಕಾಲು ಬದಲಾವಣೆ ಶಸ್ತ್ರಚಿಕಿತ್ಸೆಗಳನ್ನು ನಡೆಸುತ್ತಿದೆ. ನಿಖರವಾದ ಚಿಕಿತ್ಸೆ ಲಭಿಸುತ್ತದೆ. ಹಾಗೆಯೇ ಶೀಘ್ರವೇ ಚೇತರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ನಿರಂತರ ಕೀಲು ನೋವನ್ನು ನಿರ್ಲಕ್ಷಿಸಬಾರದು. ಶಸ್ತ್ರಚಿಕಿತ್ಸೆಗೆ ಒಳಗಾಗಲು ವಯಸ್ಸಿನ ಮಿತಿ ಇರುವುದಿಲ್ಲ. ಜೀವನದ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.