ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಸನಾತನ ಧರ್ಮ ನಾಶ: ಶಾಸಕ ಯತ್ನಾಳ ಆರೋಪ

Published 3 ಮೇ 2024, 15:18 IST
Last Updated 3 ಮೇ 2024, 15:18 IST
ಅಕ್ಷರ ಗಾತ್ರ

ಮಹಾಲಿಂಗಪುರ: ‘ಕಾಂಗ್ರೆಸ್‌ನಿಂದ ನಮ್ಮ ಸನಾತನ ಧರ್ಮ ನಶಿಸಿ ಹೋಗುತ್ತದೆ. ಭಾರತ ದೇಶ ಇಸ್ಲಾಂ ರಾಷ್ಟ್ರವಾಗುತ್ತದೆ. ಹೀಗಾಗಿ, ಇದನ್ನು ತಪ್ಪಿಸಲು ಬಿಜೆಪಿಗೆ ಮತ ನೀಡಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು’ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಪರ ಸಮೀಪದ ರನ್ನಬೆಳಗಲಿ ಪಟ್ಟಣದ ಮಹಾಲಿಂಗೇಶ್ವರ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ನೇಹಾ ಕೊಲೆಯನ್ನು ವೈಯಕ್ತಿಕ ಎನ್ನುತ್ತಾರೆ. ಹಾಗಾದರೆ ಇಂದಿರಾ, ರಾಜೀವ್ ಕೊಲೆ ಅವರ ವೈಯಕ್ತಿಕವಲ್ಲವೇ’ ಎಂದು ಪ್ರಶ್ನಿಸಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕ್ಷಣವೇ ಶ್ರೀರಾಮ ಘೋಷಣೆ ಮಾಡಿದವರು ಮತ್ತು ಹನುಮಾನ್ ಚಾಲೀಸಾ ಪಠಣ ಮಾಡಿದವರ ಮೇಲೆ ಹಲ್ಲೆ ಮತ್ತು ಹತ್ಯೆಗಳು ನಡೆಯುತ್ತಿವೆ’ ಎಂದು ದೂರಿದರು.

ಮಹಾಲಿಂಗಪ್ಪ ಗುಂಜಿಗಾವಿ ಮಾತನಾಡಿದರು. ಬಿಜೆಪಿ ಗ್ರಾಮೀಣ ಮಂಡಳದ ಅಧ್ಯಕ್ಷ ಸಂಗನಗೌಡ ಕಾತರಕಿ ಅಧ್ಯಕ್ಷತೆ ವಹಿಸಿದ್ದರು. ಅರುಣ ಕಾರಜೋಳ, ದಯಾಸಾಗರ ಪಾಟೀಲ, ಆರ್.ಟಿ.ಪಾಟೀಲ, ಸಿದ್ದುಗೌಡ ಪಾಟೀಲ, ಪಂಡಿತ ಪೂಜಾರಿ, ಶಿವನಗೌಡ ಪಾಟೀಲ, ಶ್ರೀಶೈಲಗೌಡ ಪಾಟೀಲ, ನಾಗಪ್ಪ ಅಂಬಿ, ಗಂಗಪ್ಪ ಬೀಸನಕೊಪ್ಪ, ಚಿಕ್ಕಪ್ಪ ನಾಯಕ, ಅಶೋಕ ಸಿದ್ದಾಪುರ, ಪರಪ್ಪ ದೊಡ್ಡಟ್ಟಿ, ಹನಮಂತ ಇಟಾಣಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT