ಶುಕ್ರವಾರ, ಜನವರಿ 27, 2023
27 °C

ಕೂಡಲಸಂಗಮ: ಸಂಗಮೇಶ್ವರ ದೇವಾಲಯ ದರ್ಶನದ ಅವಧಿ ಬದಲಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೂಡಲಸಂಗಮ: ಕೂಡಲಸಂಗಮ ಅಭಿವೃದ್ಧಿ ಮಂಡಳಿಯು ಸೆ.5ರಿಂದ ಸಂಗಮೇಶ್ವರ ದೇವಾಲಯದ ದರ್ಶನಕ್ಕೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 8ರವರೆಗೆ ಸಮಯ ನಿಗದಿ ಮಾಡಿದೆ.

ಕೋವಿಡ್‌ 19 ಹರಡುವಿಕೆಯ ಕಾರಣ ಮಾರ್ಚ್ 17ರಿಂದ ಜೂನ್ 7ರವರೆಗೆ ದೇವಾಲಯ ಪ್ರವೇಶ ನಿಷೇಧಿಸಲಾಗಿತ್ತು. ಜೂನ್ 8ರಿಂದ ಬೆಳಿಗ್ಗೆ 8ರಿಂದ 12, ಮಧ್ಯಾಹ್ನ 3ರಿಂದ 5ರವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಸೆ.5ರಿಂದ ಈ ಅವಧಿಯನ್ನು ಹೆಚ್ಚಿಸಲಾಗಿದೆ.

‘ರಾತ್ರಿ 8ರವರೆಗೂ ಸಂಗಮನಾಥನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ನಿರ್ದೇಶನದಂತೆ ಅಂತರ ಕಾಯ್ದುಕೊಂಡು ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು‘ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತ ಎಂ.ಗಂಗಪ್ಪ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು