ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾಲಿಂಗಪುರ | ಮನೆಗಳ ಹಂಚಿಕೆಯಲ್ಲಿ ಹಗರಣ; ತನಿಖಾ ಸಮಿತಿ ರಚನೆ

Published : 9 ಸೆಪ್ಟೆಂಬರ್ 2024, 16:09 IST
Last Updated : 9 ಸೆಪ್ಟೆಂಬರ್ 2024, 16:09 IST
ಫಾಲೋ ಮಾಡಿ
Comments

ಮಹಾಲಿಂಗಪುರ: ಸಮೀಪದ ಢವಳೇಶ್ವರ ಗ್ರಾಮದಲ್ಲಿ 2009ರಲ್ಲಿ ಪ್ರವಾಹ ಭಾದಿತ ಕುಟುಂಬಗಳ ಪುನರ್ವಸತಿಗಾಗಿ ನಿರ್ಮಿಸಿದ 295 ಆಸರೆ ಮನೆಗಳ ಹಂಚಿಕೆಯಲ್ಲಿ ಆಗಿದ್ದ ಹಗರಣ ಕುರಿತು ತನಿಖೆ ಮಾಡಲು ತನಿಖಾ ಸಮಿತಿ ರಚನೆ ಮಾಡಲಾಗಿದೆ.

ಹಗರಣ ಕುರಿತು ಉನ್ನತ ಮಟ್ಟದ ತನಿಖೆ ಮಾಡುವಂತೆ ಕೋರಿ ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಸಂಚಾಲಕ ಸಿದ್ದು ಕೊಣ್ಣೂರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ ಸೂಚನೆ ಮೇರೆಗೆ ಬಾಗಲಕೋಟೆ ಜಿಲ್ಲಾಧಿಕಾರಿ ತನಿಖಾ ಸಮಿತಿ ರಚಿಸಿ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಅಧ್ಯಕ್ಷರಾಗಿ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಸದಸ್ಯರಾಗಿ ರಬಕವಿ-ಬನಹಟ್ಟಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ, ಜಮಖಂಡಿ ಯುಕೆಪಿ ಎಸ್‍ಎಲ್‍ಓ ವಿ.ಬಿ.ಬಣಕಾರ, ರಬಕವಿ-ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ, ಢವಳೇಶ್ವರ ಗ್ರಾಮ ಪಂಚಾಯ್ತಿ ಪಿಡಿಒ ಸಿದ್ರಾಮೇಶ್ವರ ಕುಂದರಗಿಮಠ ತನಿಖಾ ಸಮಿತಿಯಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT