ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಲಿಂಗಪುರ: ಸ್ಕೌಟ್ಸ್, ಗೈಡ್ಸ್ ಬೇಸಿಗೆ ಶಿಬಿರಕ್ಕೆ ಚಾಲನೆ

Published 3 ಏಪ್ರಿಲ್ 2024, 14:04 IST
Last Updated 3 ಏಪ್ರಿಲ್ 2024, 14:04 IST
ಅಕ್ಷರ ಗಾತ್ರ

ಮಹಾಲಿಂಗಪುರ: ಸಮೀಪದ ಢವಳೇಶ್ವರ ಗ್ರಾಮದ ಸರ್ಕಾರಿ ಪ್ರಾಥಮಿಕ, ಢವಳನಾಥ ಅನುದಾನಿತ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಗಳ ಮಕ್ಕಳಿಗೆ ನಾಲ್ಕು ದಿನದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಬೇಸಿಗೆ ಶಿಬಿರಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಎಚ್.ಬಿ.ಭಜಂತ್ರಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ‘ಶಿಕ್ಷಕರು ತಮ್ಮನ್ನು ತಾವು ತೊಡಗಿಸಿಕೊಂಡು ಸ್ಕೌಟ್ಸ್ ಮತ್ತು ಗೈಡ್ಸ್ ತತ್ವಗಳನ್ನು ಮಕ್ಕಳಲ್ಲಿ ಬಿತ್ತುವ ಮೂಲಕ ಒಳ್ಳೆಯ ನಾಗರಿಕರನ್ನಾಗಿಸಲು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ಢವಳನಾಥ ಶಾಲೆ ಮುಖ್ಯ ಶಿಕ್ಷಕ ಕೆ.ಜಿ.ನೇಗಿನಹಾಳ, ಗೈಡ್ಸ್ ಲೀಡರ್ ಶಶಿಕಲಾ ಬೆನಕಟ್ಟಿ, ಸ್ಕೌಟ್ಸ್ ಮಾಸ್ಟರ್ ಸಿ.ವಿ.ದಾದನಟ್ಟಿ, ಡಿ.ಎಂ.ಮಹಾಜನ, ಎ.ಬಿ.ಚೌರಡ್ಡಿ, ಶಿಕ್ಷಕಿ ಭಾಗ್ಯಶ್ರೀ ಇದ್ದರು. 68 ಸ್ಕೌಟ್ಸ್ ವಿದ್ಯಾರ್ಥಿಗಳು, 32 ಗೈಡ್ಸ್ ವಿದ್ಯಾರ್ಥಿನಿಯರು ಶಿಬಿರದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT