ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವು

Last Updated 10 ಜುಲೈ 2019, 6:40 IST
ಅಕ್ಷರ ಗಾತ್ರ

ಬಾಗಲಕೋಟೆ: ಜಮಖಂಡಿಯ ರಾಯಲ್ ಪ್ಯಾಲೇಸ್ ಕಾಲೇಜು ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಿಯಾಂಕ ಮೇತ್ರಿ (17) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ಮಂಗಳವಾರ ತಡರಾತ್ರಿ ಪ್ರಿಯಾಂಕ ನಾಲ್ಕನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಾಲೇಜಿನ ಆಡಳಿತ ಮಂಡಳಿ ಹೇಳಿದೆ. ಆದರೆ ಪ್ರಿಯಾಂಕ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ತನಿಖೆ ನಡೆಸುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಿಯಾಂಕ ರಾಯಲ್ ಪ್ಯಾಲೇಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದಳು. ಕಾಲೇಜು ಹಾಗೂ ಹಾಸ್ಟೆಲ್ ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಒಡೆತನದಲ್ಲಿವೆ.

ಪ್ರಿಯಾಂಕಾ ಮೂಲತಃ ರಬಕವಿ-ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ ನಿವಾಸಿ.

ಹಾಸ್ಟೆಲ್ ಎದುರು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಜಮಖಂಡಿ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT