ಹುನಗುಂದ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ ಯೋಜನೆಯಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

500 ಕೋಟಿ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಗೆ ಸೋಮವಾರ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಮಹಿಳಾ ಪ್ರಯಾಣಿಕರಿಗೆ ಟಿಕೆಟ್ ನೀಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ. ಯೋಜನೆ ರಾಜ್ಯದ ಹೆಣ್ಣುಮಕ್ಕಳ ಬದುಕಿಗೆ ಶಕ್ತಿ ತುಂಬಿದೆ. ಸ್ವಾವಲಂಬಿ ಬದುಕಿನೆಡೆಗೆ ಪಯಣಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಲಾಗಿದೆ. ರಾಜ್ಯದ ಧಾರ್ಮಿಕ ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡುವ ಮೂಲಕ ಯೋಜನೆಯನ್ನು ಸ್ಮರಣೀಯವಾಗಿಸಿದ್ದಾರೆ. ಮಹಿಳೆಯರ ಉಚಿತ ಪ್ರಯಾಣದಿಂದ ಕೆಎಸ್ಆರ್ಟಿಸಿಯ ನಿಗಮಗಳಿಗೆ ರಾಜ್ಯ ಸರ್ಕಾರ 12 ಸಾವಿರ ಕೋಟಿಗೂ ಹೆಚ್ಚು ಹಣ ನೀಡಿದೆ. ಶಕ್ತಿ ಯೋಜನೆ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಗ್ಗೆ ಹೆಮ್ಮೆಯಿದೆ ಎಂದರು.

ಮಹಿಳಾ ಪ್ರಯಾಣಿಕರಿಗೆ ಕೆಎಸ್ ಆರ್ ಟಿ ಸಿ ಮಹಿಳಾ ಸಿಬ್ಬಂದಿ ಗುಲಾಬಿ ಹೂವು ನೀಡಿ ಸ್ವಾಗತಿಸಿದರು. ಸಿಹಿ ವಿತರಿಸಿ ಸಂಭ್ರಮಿಸಿದರು.

ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಮುಖಂಡರಾದ ಶಿವಾನಂದ ಕಂಠಿ, ಜೈನಸಾಬ್ ಹಗೇದಾಳ, ನೀಲಪ್ಪ ತಪೇಲಿ, ಸಂಗಮೇಶ ಚೂರಿ, ಘಟಕ ವ್ಯವಸ್ಥಾಪಕ ಅರವಿಂದ ಭಜಂತ್ರಿ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.