ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೈಕಮಾಂಡ್ ಸೂಚಿಸಿದರೆ ಶಿಗ್ಗಾವಿಯಿಂದ ಸ್ಪರ್ಧೆ

Published : 2 ಅಕ್ಟೋಬರ್ 2024, 16:17 IST
Last Updated : 2 ಅಕ್ಟೋಬರ್ 2024, 16:17 IST
ಫಾಲೋ ಮಾಡಿ
Comments

ಬೀಳಗಿ: ಹೈಕಮಾಂಡ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಪಕ್ಷದ ಮುಖಂಡು ಒಪ್ಪಿಗೆ ನೀಡಿದರೆ, ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಹೇಳಿದರು.

ತಾಲ್ಲೂಕಿನ ಬಿಸನಾಳ ಗ್ರಾಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಎಲ್ಲಿಯೂ ಟಿಕೆಟ್‌ ಕೇಳಿಲ್ಲ. ಕೇಳುವುದೂ ಇಲ್ಲ. ಹೈಕಮಾಂಡ್‌ ಸೂಚಿಸಿದಡೆ ಸ್ಪರ್ಧಿಸುವೆ ಎಂದರು.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಚುನಾವಣೆಗೆ ಬಳಸಿಕೊಂಡಿದ್ದು ನಾಚಿಕೆಗೇಡಿತನದ ಸಂಗತಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದರು.

ರಾಜ್ಯ ಬಿಜೆಪಿಯಲ್ಲಿ ಕೆಲ ಸಣ್ಣಪುಟ್ಟ ಸಮಸ್ಯೆಗಳು ಇರಬಹುದು. ಹೈಕಮಾಂಡ್ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತದೆ. ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಮೋಹನ ಜಾಧವ, ಎಂ ಎಂ ಶಂಭೋಜಿ, ಮಲ್ಲಿಕಾರ್ಜುನ ಅಂಗಡಿ, ಹೊಳೆಬಸು ಬಾಳಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT