ಬಾಗಲಕೋಟೆ: ನಗರದಲ್ಲಿ ಶಿವಾಜಿ ಮಹಾರಾಜ ಹಾಗೂ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆಗೆ ರಾಜ್ಯ ಸರ್ಕಾರ ತಡೆಯೊಡ್ಡುತ್ತಿದೆ ಎಂದು ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ ರಾಜ್ಯಸಭೆ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದರು.

‘ಎರಡು ಬಾರಿ ನಗರಸಭೆ ಸಂಪೂರ್ಣ ಬಹುಮತದಿಂದ ನಿರ್ಣಯ ತೆಗೆದುಕೊಂಡಿದೆ. ವಿವಿಧ ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳಲಾಗಿತ್ತು. ಜಾಗ ಗುರುತಿಸಿ, ಅಲ್ಲಿ ಭೂಮಿ ಪೂಜೆಯನ್ನು ಮಾಡಲಾಗಿತ್ತು’ ಎಂದು ವಿವರಿಸಿದರು.

‘₹7.5 ಲಕ್ಷ ವೆಚ್ಚದಲ್ಲಿ 18 ಅಡಿ ಎತ್ತರದ ಎರಡೂ ಮೂರ್ತಿಗಳನ್ನು ತಯಾರಿಸಲಾಗಿದೆ. ಪ್ರತಿಷ್ಠಾಪನೆಗೆ ಬೇಕಾದ ಮಂಟಪವನ್ನೂ ನಿರ್ಮಿಸಲಾಗಿದೆ. ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುಂದಾದಾಗ ಜಿಲ್ಲಾಡಳಿತ ತಡೆ ಹಿಡಿದೆ. ಹಿಂದೂ ಶ್ರದ್ಧಾಕೇಂದ್ರದ ವಿರೋಧ, ಸನಾತನ ಧರ್ಮದ ವಿರೋಧವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಶಿವಾಜಿ ಮಹಾರಾಜರಿಗೆ ಅಪಮಾನ ಮಾಡಲಾಗುತ್ತಿದೆ. ಶಿವಾಜಿ ಜಯಂತಿ ಸಂದರ್ಭದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಶ್ಯಕ ಸೂಚನೆ ನೀಡಬೇಕು’ ಎಂದು ಮನವಿ ಮಾಡಿದರು.