ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡಲಸಂಗಮ ಐಕ್ಯಮಂಪಟ ವೀಕ್ಷಿಸಿ ‘ನೋ ಪಾಲಿಟಿಕ್ಸ್’ ಎಂದ ಸಿದ್ದರಾಮಯ್ಯ

Last Updated 30 ಜೂನ್ 2019, 7:26 IST
ಅಕ್ಷರ ಗಾತ್ರ

ಬಾಗಲಕೋಟೆ: ಕೂಡಲಸಂಗಮದ ಬಸವಣ್ಣನ ಐಕ್ಯಮಂಟಪಕ್ಕೆ ಭಾನುವಾರ ಭೇಟಿ ನೀಡಿದ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾನಿಗೀಡಾಗಿರುವ ಕಟ್ಟಡದ ಭಾಗಗಳನ್ನು ವೀಕ್ಷಣೆ ಮಾಡಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಐಕ್ಯಮಂಟಪದ ದುರಸ್ತಿಗೆ ಕೂಡಲಸಂಗಮ ಅಭಿವೃದ್ಧಿ ಮಂಡಳಿ ₹80 ಲಕ್ಷ ವೆಚ್ಚದಲ್ಲಿ ಯೋಜನೆ ರೂಪಿಸಿದೆ. ಸರ್ಕಾರದಿಂದ ಅಗತ್ಯ ಸಂಪನ್ಮೂಲ ಕೊಟ್ಟು ಬೇಗನೇ ಕಾಮಗಾರಿ ಮುಗಿಸುವಂತೆ ಮುಖ್ಯಮಂತ್ರಿಗೆ ನಾನೂ ಪತ್ರ ಬರೆಯುವೆ ಎಂದರು.

ಐಕ್ಯಮಂಟಪದ ವೀಕ್ಷಣೆಗೆ ಬಂದಿರುವೆ. ಇಲ್ಲಿ ನೋ ಪಾಲಿಟಿಕ್ಸ್. ನಾನು ಇಲ್ಲಿ ರಾಜಕೀಯ ಮಾತನಾಡಲ್ಲ ಎಂದುಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಕೂಡಲಸಂಗಮ ಅಭಿವೃದ್ಧಿ ಮಂಡಳಿ ಆಯುಕ್ತೆ ರಾಜಶ್ರೀ ಅಗಸರ, ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಸಿದ್ದರಾಮಯ್ಯ ಜೊತೆಗಿದ್ದು, ಬಿರುಕುಬಿಟ್ಟ ಕಟ್ಟಡದ ಭಾಗಗಳನ್ನು ತೋರಿಸಿದರು.

ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಬೀಡುಬಿಟ್ಟಿರುವ ಸಿದ್ದರಾಮಯ್ಯ, ಶನಿವಾರ ರಾತ್ರಿ ಆಲಮಟ್ಟಿಯಲ್ಲಿ ವಾಸ್ತವ್ತ ಹೂಡಿದ್ದರು.

ಸಿದ್ದರಾಮಯ್ಯ ಅಧಿಕೃತ ಪ್ರವಾಸ ಪಟ್ಟಿಯಲ್ಲಿ ಕೂಡಲಸಂಗಮ ಐಕ್ಯಮಂಟಪದ ವೀಕ್ಷಣೆ ಸೇರಿರಲಿಲ್ಲ. ದಿಢೀರನೆ ಭೇಟಿ ನಿಗದಿಯಾಯಿತು. ಈ ವೇಳೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಬಾಯಕ್ಕ ಮೇಟಿ, ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ, ಮಾಜಿ ಸಚಿವೆ ಉಮಾಶ್ರೀ ಸಿದ್ದರಾಮಯ್ಯ ಜೊತೆಗಿದ್ದರು.

ಐಕ್ಯಮಂಟಪ ಕಟ್ಟಡ ಬಿರುಕು ಬಿಟ್ಟಿರುವ ಕಾರಣ ಕಳೆದ 33 ದಿನಗಳಿಂದ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಆದರೆ ಇಲ್ಲಿಯವರೆಗೂ ಕಟ್ಟಡದ ದುರಸ್ತಿ ಕಾಮಗಾರಿ ಆರಂಭವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT