4
ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್, ಕೆರೆಗಳಿಗೆ ನೀರು ತುಂಬಿಸಲು ಅನುದಾನಕ್ಕೆ ಮನವಿ

ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

Published:
Updated:

ಬಾಗಲಕೋಟೆ: ನೇಕಾರರ ವಲಸೆ ತಪ್ಪಿಸಿ ಅವರಿಗೆ ಶಾಶ್ವತ ಉದ್ಯೋಗ ಕಲ್ಪಿಸಲು ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್, ಪವರ್‌ಲೂಮ್ ಪಾರ್ಕ್ ಮತ್ತು ಗಾರ್ಮೆಂಟ್ ಸ್ಥಾಪಿಸುವಂತೆ ಹಾಗೂ ಕ್ಷೇತ್ರದ ಪ್ರಮುಖ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಬಾದಾಮಿ ಶಾಸಕ ಸಿದ್ದರಾಮಯ್ಯ ಎರಡು ಪ್ರತ್ಯೇಕ ಪತ್ರ ಬರೆದಿದ್ದಾರೆ.

ಗುಳೇದಗುಡ್ಡದ ನೇಕಾರರ ಸಮುದಾಯಗಳ ಒಕ್ಕೂಟದ ಮನವಿಯ ಹಿನ್ನೆಲೆಯಲ್ಲಿ ಅಸಂಘಟಿತ ವಲಯದ ದುಡಿಯುವ ನೇಕಾರರ ಉಳಿವಿಗಾಗಿ ಹಾಗೂ ಅವರ ಜೀವನೋಪಾಯಕ್ಕಾಗಿ ಜವಳಿ ಪಾರ್ಕ್‌ ಸ್ಥಾಪನೆಯ ಅಗತ್ಯವಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜೊತೆಗೆ ನೇಕಾರರ ಒಕ್ಕೂಟದ ಮನವಿ ಪತ್ರ ಲಗತ್ತಿಸಿದ್ದಾರೆ.

ಕೆರೆಗಳಿಗೆ ನೀರು ತುಂಬಿಸಿ:

ಬಾದಾಮಿ ಕ್ಷೇತ್ರದ ವ್ಯಾಪ್ತಿಯ ಪರ್ವತಿಕೆರೆ, ಗಂಜಿಕೆರೆ ಹಾಗೂ ಹಿರೆಕೆರೆಗೆ ನೀರು ತುಂಬಿಸಬೇಕು ಎಂಬುದು ಈ ಭಾಗದ ರೈತರ ಬಹುದಿನದ ಬೇಡಿಕೆಯಾಗಿದೆ. ಹಾಗಾಗಿ ಮಲಪ್ರಭಾ ನದಿಯ ಆಸಂಗಿ ಬ್ಯಾರೇಜ್‌ನಿಂದ ಈ ಕೆರೆಗಳಿಗೆ ನೀರು ತುಂಬಿಸಲು ₹12 ಕೋಟಿ ಅಂದಾಜುಪಟ್ಟಿ ತಯಾರಿಸಲಾಗಿದೆ. ಕೂಡಲೇ ಈ ಮೊತ್ತ ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಸಿಎಂಗೆ ಮತ್ತೊಂದು ಪತ್ರ ಬರೆದಿದ್ದಾರೆ.

ಕೆರೆಗಳಿಗೆ ನೀರು ತುಂಬಿಸಿದರೆ ಸ್ಥಳೀಯ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಿದಂತಾಗುತ್ತದೆ. ಗುಳೇದಗುಡ್ಡ ಪಟ್ಟಣದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಳಗೊಂಡು ಬತ್ತಿರುವ ಕೊಳವೆಬಾವಿಗಳು ಜೀವ ಪಡೆಯಲಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಎರಡೂ ಪತ್ರಗಳನ್ನು ಶಾಸಕ ಸಿದ್ದರಾಮಯ್ಯ ಅವರ ಆಪ್ತ ಹೊಳಬಸುಶೆಟ್ಟರ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ಪದವಿ ಕಾಲೇಜು; ಈ ವರ್ಷ ಅನುಮಾನ

ಮಕ್ಕಳು ಸರ್ಕಾರಿ ಪದವಿ ಕಾಲೇಜಿನಲ್ಲಿ ಓದಬೇಕು ಎಂಬ ಗುಳೇದಗುಡ್ದದ ನಿವಾಸಿಗಳ ಕನಸು ಈ ವರ್ಷ ನನಸಾಗುವ ಸಾಧ್ಯತೆ ಇಲ್ಲ. ಈ ವರ್ಷವೇ ಪದವಿ ಕಾಲೇಜು ಆರಂಭಿಸುವುದಾಗಿ ಶಾಸಕ ಸಿದ್ದರಾಮಯ್ಯ ಇತ್ತೀಚೆಗೆ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಮತದಾರರಿಗೆ ಕೃತಜ್ಞತೆ ಸಮಾವೇಶದಲ್ಲಿ ಘೋಷಿಸಿದ್ದರು. ಆದರೆ ಅದಕ್ಕೆ ಸರ್ಕಾರದಲ್ಲಿ ಸ್ಪಂದನೆ ದೊರೆತಿಲ್ಲ ಎನ್ನಲಾಗಿದೆ.

ಸರ್ಕಾರಿ ಪದವಿ ಕಾಲೇಜು ಆರಂಭಕ್ಕೆ ಉನ್ನತ ಶಿಕ್ಷಣ ಇಲಾಖೆಯಿಂದ ಹಣಕಾಸು ಇಲಾಖೆಗೆ ಪ್ರಸ್ತಾವ ಕಳುಹಿಸಲಾಗಿತ್ತು. ಆವರು ಈ ವರ್ಷ ಸಾಧ್ಯವಿಲ್ಲ. ಮುಂದಿನ ವರ್ಷ ಮಾಡಬಹುದು ಎಂದು ಟಿಪ್ಪಣಿ ಬರೆದಿದ್ದಾರೆ.

‘ಸಮನ್ವಯ ಸಮಿತಿ ಸಭೆ ಮುಗಿಯಲಿ ಎಂದು ಕಾಯುತ್ತಿದ್ದೆವು. ಈಗ ಅದು ಪೂರ್ಣಗೊಂಡಿದೆ. ಸಿದ್ದರಾಮಯ್ಯ ಅವರ ಮೂಲಕ ಸಿಎಂ ಮೇಲೆ ಒತ್ತಡ ಹಾಕಿಸಿ, ಈ ವರ್ಷವೇ ಕಾಲೇಜು ಆರಂಭಿಸಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !