ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ವಿಸ್ತರಣೆ: ಹೌದಪ್ಪಗಳಿಗೆ ಮಣೆ

ಸಿಎಂ ವಿರುದ್ಧ ತೇರದಾಳ ಶಾಸಕ ಸಿದ್ದು ಸವದಿ ಅಸಮಾಧಾನ
Last Updated 14 ಜನವರಿ 2021, 12:08 IST
ಅಕ್ಷರ ಗಾತ್ರ

ಬಾಗಲಕೋಟೆ: ಸಚಿವ ಸಂಪುಟ ವಿಸ್ತರಣೆ ನಂತರ ರಾಜ್ಯ ನೇಕಾರ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ತೇರದಾಳ ಶಾಸಕ ಸಿದ್ದು ಸವದಿ ಫೇಸ್‌ಬುಕ್‌ನಲ್ಲಿ ನೋವು ತೋಡಿಕೊಂಡಿದ್ದಾರೆ.

‘ಹಿರಿತನ, ಪಕ್ಷನಿಷ್ಠೆ, ಸಿದ್ಧಾಂತಕ್ಕೆ ಬದ್ಧರಾಗಿರುವರಿಗೆ ಸಚಿವ ಸ್ಥಾನ ಕೊಟ್ಟಿಲ್ಲ. ಗಾಡ್‌ಫಾದರ್ ಬೆಂಬಲವಿಲ್ಲದೇ ಪಕ್ಷವನ್ನು ಎಲ್ಲಾ ಹಂತದಲ್ಲಿ ಅಧಿಕಾರಕ್ಕೆ ತರುವಂತಹವರು. ಪಕ್ಷದ ಆದೇಶ, ಮನಸಾಪೂರ್ವಕ ಪಾಲನೆ ಮಾಡುವ, ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧರಿರುವವರಿಗೆ ಯಾವುದೇ ಸ್ಥಾನಮಾನ ಕೊಡದೇ ಹೌದಪ್ಪಗಳಿಗೆ ಈ ದಿನಗಳಲ್ಲಿ ಪಟ್ಟ ಕಟ್ಟುವ ಚಾಳಿ ಬೆಳೆಯುತ್ತಿದೆ. ಅದನ್ನು ನೋಡಿ ನೋವಾಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

‘ಇದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು. ಹೊತ್ತು ಬಂದಂತೆ ಕೊಡೆ ಹಿಡಿಯುವವರಿಗೆ ಮಣೆ ಹಾಕುವುದನ್ನು ಬಿಟ್ಟು ಪಕ್ಷ ನಿಷ್ಠರನ್ನು ಪರಿಗಣಿಸಿದರೆ ನಿಮಗೂ ಗೌರವ ಮತ್ತು ಪಕ್ಷಕ್ಕೂ ಒಳ್ಳೆಯದಾಗುವುದರಲ್ಲಿ ಎರಡು ಮಾತಿಲ್ಲ’ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಸಮಾಧಾನ ತೋಡಿಕೊಂಡಿದ್ದಾರೆ. ಕೊನೆಗೆ, ‘ಜೈ ಬಿಜೆಪಿ’ ಎಂದು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT