ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Published 19 ಜೂನ್ 2024, 15:51 IST
Last Updated 19 ಜೂನ್ 2024, 15:51 IST
ಅಕ್ಷರ ಗಾತ್ರ

ಇಳಕಲ್‌ : ನಗರದ ಬಸ್‌ ನಿಲ್ದಾಣ ಎದುರಿನ ಪೊಲೀಸ್‌ ಠಾಣೆಯ ಪಕ್ಕದ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಹೆಚ್ಚು ಜನರಿಗೆ ಅನುಕೂಲವಾಗುವ ರೀತಿಯಲ್ಲಿಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ ಸೂಕ್ತ ಜಾಗ ಗುರುತಿಸುವಂತೆ ಶಾಸಕ ಕಾಶಪ್ಪನವರ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ನಿಟ್ಟಿನಲ್ಲಿ ಇಲ್ಲಿಯ ಪೊಲೀಸ್ ಠಾಣೆಯ ಪಕ್ಕದ ಜಾಗದಲ್ಲಿ ನಿರ್ಮಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ತಹಶೀಲ್ದಾರ್ ಸತೀಶ ಕೂಡಲಗಿ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ನಗರಸಭೆ‌ ಎಇ ಎಸ್.ಎಸ್. ಪಾಟೀಲ, ನಗರಸಭೆ ಸಿಬ್ಬಂದಿ  ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT