ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತ್ರಿಪದಿಗಳ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ: ಎಂ.ಎಂ. ಮುಗಳಖೋಡ

Published 20 ಫೆಬ್ರುವರಿ 2024, 15:15 IST
Last Updated 20 ಫೆಬ್ರುವರಿ 2024, 15:15 IST
ಅಕ್ಷರ ಗಾತ್ರ

ಮಹಾಲಿಂಗಪುರ: ಜನರ ಆಡು ಭಾಷೆಯಲ್ಲಿ ತ್ರಿಪದಿಗಳನ್ನು ರಚಿಸಿ ಸಮಾಜದ ಅಂಕು–ಡೊಂಕುಗಳನ್ನು ಚಿಕಿತ್ಸಕ ನೋಟದೊಂದಿಗೆ ತಿದ್ದಿದ ಸಮಾಜ ಸುಧಾರಕ ಸರ್ವಜ್ಞ ಎಂದು ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಎಂ.ಎಂ. ಮುಗಳಖೋಡ ಹೇಳಿದರು.

ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮಂಗಳವಾರ ಸರ್ವಜ್ಞ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಸರ್ವಜ್ಞನ ತ್ರಿಪದಿಗಳು ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆಯಾಗಿದೆ. ತ್ರಿಪದಿಗಳು ಸಾರುವ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ. ಇವು ಹಲವು ಭಾಷೆಗಳಿಗೆ ಭಾಷಾಂತರಗೊಂಡಿದ್ದು, ಭಾಷೆ ಮತ್ತು ಗಡಿಗಳ ಎಲ್ಲೆ ಮೀರಿ ಕರ್ನಾಟಕದ ಕೀರ್ತಿ ಬೆಳಗಿಸಿವೆ ಎಂದರು.

ಸಿದ್ದು ಅಳ್ಳಿಮಟ್ಟಿ, ರಾಜು ಹೂಗಾರ, ಎಂ.ಕೆ.ದಳವಾಯಿ, ಸುರೇಶ ಹರಿಜನ, ಎಸ್.ಜಿ.ಕತ್ತಿ, ಪ್ರಕಾಶ ಕಟಾವಿ, ರಾಮು ಮಾಂಗ, ಮಹಾಲಿಂಗ ಮಾಂಗ, ಎಲ್.ಎಂ.ಪರೀಟ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT