ಕೆರೂರ( ಬಾಗಲಕೋಟೆ ಜಿಲ್ಲೆ): ಸಮೀಪದ ಚಿಂಚಲಕಟ್ಟಿ ಎಲ್ಎಟಿ ಗ್ರಾಮದ ಯೋಧ ಉಪೇಂದ್ರ ಸೋಮನಾಥ ರಾಠೋಡ (23) ಬುಧವಾರ ಸೇನಾ ತರಬೇತಿ ವೇಳೆ ಹೃದಯಾಘಾತದಿಂದ ಚಂಡೀಗಢದಲ್ಲಿ ಮೃತಪಟ್ಟಿದ್ದಾರೆ.

ಕಳೆದ ಮಾರ್ಚ್ನಲ್ಲಿ ಅಸ್ಸಾಂ ರೈಫಲ್ಸ್ನಲ್ಲಿ ಸೇನೆಗೆ ಆಯ್ಕೆಯಾಗಿದ್ದ ಉಪೇಂದ್ರ, ಮೂರು ತಿಂಗಳಿನಿಂದ ಚಂಡೀಗಢದಲ್ಲಿ ಸೇನಾ ತರಬೇತಿ ಪಡೆಯುತ್ತಿದ್ದರು.

‘ಪಾರ್ಥಿವ ಶರೀರವನ್ನು ಶುಕ್ರವಾರ ಬೆಳಿಗ್ಗೆ ವಿಮಾನದ ಮೂಲಕ ಬೆಳಗಾವಿಗೆ ತಂದು, ಅಲ್ಲಿಂದ ಸೇನಾ ವಾಹನದಲ್ಲಿ ಕೆರೂರ ಪಟ್ಟಣಕ್ಕೆ ತರಲಾಗುವುದು. ಗ್ರಾಮದಲ್ಲಿ ಯೋಧನ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಕೆರೂರ ಉಪತಹಶೀಲ್ದಾರ್ ವೀರೇಶ ಬಡಿಗೇರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.