ಕುಳಗೇರಿ ಕ್ರಾಸ್ ಸಮೀಪದ ಚಿರ್ಲಕೊಪ್ಪ ಗ್ರಾಮದಲ್ಲಿ ಈಚೆಗೆ ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದ ಬಾಲಕಿಯರ ವಿಭಾಗದ ಕಬಡ್ಡಿ ಫೈನಲ್ ಪಂದ್ಯದಲ್ಲಿ ಖಾನಾಪೂರ ಎಸ್.ಕೆ ವಿರುದ್ದ ಸೋಮನಕೊಪ್ಪ ಶಾಲೆಯ ಕಬಡ್ಡಿ ತಂಡವು 12 ಅಂಕಗಳಿಂದ ಮಣಿಸಿ ಪ್ರಥಮ ಸ್ಥಾನ ಪಡೆಯಿತು. ಬಾಲಕಿಯರನ್ನು ಶಾಲೆಯ ಮುಖ್ಯಶಿಕ್ಷಕಿ ಜಿ.ಆರ್.ಕಣ್ಣಿ, ತರಬೇತಿದಾರ ಎಚ್.ಎಂ.ಯತ್ನಟ್ಟಿ, ಸಿಬ್ಬಂದಿ ವರ್ಗ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವಾನಂದ ವಾಲಿಕಾರ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಅಭಿನಂದಿಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.