ಬಾಗಲಕೋಟೆ: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಯಾವ ಶಾಲೆಯ ಫಲಿತಾಂಶ ಕಳಪೆಯಾಗಿರುತ್ತದೆಯೋ ಅಂತಹ ಶಾಲೆಗೆ ನೋಟಿಸ್ ನೀಡಲಾಗುವುದು. ಆದ್ದರಿಂದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಫಲಿತಾಂಶ ಸುಧಾರಣೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಧಾರವಾಡ ವಲಯ ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಈಶ್ವರ ಉಳ್ಳಾಗಡ್ಡಿ ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಮತ್ತು ಅನುಷ್ಠಾನ ಅಧಿಕಾರಿಗಳ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಈ ವರ್ಷದ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಶೇ100ರಷ್ಟು ಸಾಧಿಸಬೇಕೆಂಬ ಗುರಿ ಹೊಂದಲಾಗಿದೆ. ಫಲಿತಾಂಶ ಸುಧಾರಣೆಗಾಗಿ 29 ಅಂಶಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುತ್ತದೆ. ಸರಿಯಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಿದರೆ ಉತ್ತಮ ಫಲಿತಾಂಶ ಖಂಡಿತವಾಗಿ ಬರುತ್ತದೆ ಎಂದರು.

ಕಾರ್ಯಾಗಾರ ಉದ್ಘಾಟಿಸಿ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ವಿದ್ಯಾರ್ಥಿಗಳ ಸುಂದರ ಭವಿಷ್ಯ ರೂಪಿಸುವ ಶಿಲ್ಪಿಗಳಾಗಿರುತ್ತಾರೆ. ವಿದ್ಯಾರ್ಥಿಗಳ ನಡುವೆ ಯಾವುದೇ ತಾರತಮ್ಯ ಮಾಡದೇ, ಎಲ್ಲರನ್ನೂ ಪ್ರೀತಿಯಿಂದ ಕಂಡು ಪ್ರೋತ್ಸಾಹಿಸಿ, ಪರೀಕ್ಷೆಗಳನ್ನು ಎದುರಿಸಲು ಆತ್ಮಸ್ಥೈರ್ಯ ತುಂಬಬೇಕು. ಮುಂದೆ ಅದೇ ಮಕ್ಕಳು ದೇಶವನ್ನು ಆಳುವ ನಾಯಕರಾಗುತ್ತಾರೆ ಎಂದರು.

ಪಾಲಕರು ಕೂಡ ಮಕ್ಕಳೊಂದಿಗೆ ಬೆರೆತು ಓದಲು ಮಾರ್ಗದರ್ಶನ ಮಾಡಿದಲ್ಲಿ ಉಜ್ವಲ ಭವಿಷ್ಯ ರೂಪಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಜ್ಞಾನಕ್ಕಾಗಿ ಓದಬೇಕು. ಜ್ಞಾನ ಜೀವನದ ಕೊನೆಯವರೆಗೂ ಉಳಿಯುತ್ತದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷಾ ಭಯ ಇಟ್ಟುಕೊಳ್ಳದೇ, ಮಾನಸಿಕ ಆರೋಗ್ಯ ಕಾಪಾಡಿಕೊಂಡು ಗುರಿ ಸಾಧಿಸಬೇಕು. ಪ್ರೌಢ ಶಾಲಾ ಹಂತದಲ್ಲಿಯೇ ಮಾದಕ ವಸ್ತುಗಳಿಗೆ ಆಕರ್ಷಿತರಾಗುವ ಸಂಭವ ಇರುವುದರಿಂದ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಬೆರೆತು ವಿದ್ಯಾರ್ಥಿಗಳ ಪ್ರತಿಭೆ ಹೊರ ತರಲು ಪ್ರಯತ್ನಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ರಾಜ್ಯ ಮಟ್ಟದಲ್ಲಿ ಮೊದಲ ಸ್ಥಾನ ಗಳಿಸಲು ಶಿಕ್ಷಕರೊಂದಿಗೆ ಅಧಿಕಾರಿಗಳ ಜವಾಬ್ದಾರಿ ಕೂಡ ಇದೆ. ನೋಡಲ್ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಲೋಪಗಳನ್ನು ಸರಿ ಪಡಿಸುವ ಕೆಲಸ ಮಾಡಬೇಕು ಎಂದರು.

2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 620 ಹಾಗೂ ಅದಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಜೀತ ಮನ್ನಿಕೇರಿ, ಧಾರವಾಡ ವಲಯದ ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತರ ಕಾರ್ಯಾಲಯದ ನಿರ್ದೇಶಕ ಈಶ್ವರ ನಾಯಕ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಸನ್ಮಾನ ಫಲಿತಾಂಶ ಸುಧಾರಣೆಗೆ ಎಲ್ಲರೂ ಕೈಜೋಡಿಸಿ ಲೋಪ ಸರಿಪಡಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.