ಬಾಗಲಕೋಟೆ: ಪಂಚಮಸಾಲಿ ಮೀಸಲಾತಿ ಹೋರಾಟ, ಸಮಾಜದಲ್ಲಿನ ಭಿನ್ನಾಭಿಪ್ರಾಯ ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದಲ್ಲಿ ಏ.20ರಂದು ಮಧ್ಯಾಹ್ನ 3ಕ್ಕೆ ಸಮಾಜದ ರಾಜ್ಯಮಟ್ಟದ ಸಭೆ ಕರೆಯಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ರಾಷ್ಟ, ರಾಜ್ಯ ಘಟಕಗಳ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ಸಚಿವರು, ಶಾಸಕರು ಸೇರಿದಂತೆ ಸಮಾಜದ ಎಲ್ಲರೂ ಭಾಗವಹಿಸಬೇಕು ಎಂದರು.

ಜಗತ್ತಿನಾದ್ಯಂತ ಸಂಘಟನೆ ಸದೃಢವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವುದು, ಸಮಾಜಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿಕೊಂಡು ಬಂದಿದ್ದೇನೆ ಎಂದು ಹೆಳಿದರು.

ಸಮಾಜದ ಯಾವುದೇ ವ್ಯಕ್ತಿ ಪರವಾಗಿ ಹೋರಾಟ ಮಾಡಿಲ್ಲ. ಸಮಾಜದ ಪರವಾಗಿ ಹೋರಾಟ ಮಾಡಿದ್ದೇನೆ. ಗೊಂದಲ, ಭಿನ್ನಾಭಿಪ್ರಾಯ ಸಹಜ. ಅಜ್ಞಾನ, ಆಸೆ,ಆಮಿಷಕ್ಕೆ ಒಳಗಾಗಿ ಟೀಕೆ ಮಾಡುತ್ತಿದ್ದಾರೆ. ಆತ್ಮವಾವಲೋಕನ ಮಾಡಿಕೊಳ್ಳಲಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.