ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ ಹಿಂದೂ ಜಾಗರಣ ವೇದಿಕೆ ಸದಸ್ಯರ ಮೇಲೆ ಕಲ್ಲು ತೂರಾಟ: ಲಾಠಿ ಚಾರ್ಜ್

ಕಲ್ಲು ತೂರಾಟದಿಂದ ಕೋಪಗೊಂಡ ವೇದಿಕೆ ಸದಸ್ಯರು ಪೊಲೀಸರೊಂದಿಗೆ ಮಾತಿಗೆ ಇಳಿದಾಗ ಎಲ್ಲರನ್ನು ಚದುರಿಸಲು ಲಾಠಿ ಬೀಸಲಾಯಿತು.
Published 8 ಮೇ 2024, 16:09 IST
Last Updated 8 ಮೇ 2024, 16:09 IST
ಅಕ್ಷರ ಗಾತ್ರ

ಬಾಗಲಕೋಟೆ: ನವನಗರ ಪೊಲೀಸ್ ಠಾಣೆಗೆ ಹೋದಾಗ ಸಿಪಿಐ ಗೌರವದಿಂದ ನಡೆದುಕೊಳ್ಳಲಿಲ್ಲ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬುಧವಾರ ರಾತ್ರಿ ಪ್ರತಿಭಟನೆ ಮಾಡುತ್ತಿದ್ದ ಹಿಂದೂ ಜಾಗರಣ ವೇದಿಕೆ ಸದಸ್ಯರ ಮೇಲೆ ಕಲ್ಲು ತೂರಾಡಲಾಗಿದೆ. ಜನರನ್ನು ಚದುರಿಸಲು ಲಾಠಿ ಪ್ರಹಾರ ಮಾಡಲಾಗಿದೆ.

ನವನಗರ ಪೊಲೀಸ್ ಠಾಣೆಯ ಸಿಪಿಐ ಎಸ್‌.ಎಸ್‌. ಬಿರಾದಾರ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರಸಭೆಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದರು. ಪೊಲೀಸರು ಪ್ರತಿಭಟನೆ ಅಂತ್ಯಗೊಳಿಸುವಂತೆ ಮನವಿ ಮಾಡುತ್ತಿದ್ದರು. ಈ ವೇಳೆ ಕೆಲ ದುಷ್ಕರ್ಮಿಗಳು ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

ಕಲ್ಲು ತೂರಾಟದಿಂದ ಕೋಪಗೊಂಡ ವೇದಿಕೆ ಸದಸ್ಯರು ಪೊಲೀಸರೊಂದಿಗೆ ಮಾತಿಗೆ ಇಳಿದಾಗ ಎಲ್ಲರನ್ನು ಚದುರಿಸಲು ಲಾಠಿ ಬೀಸಲಾಯಿತು.

ಕುಮಾರಸ್ವಾಮಿ ಹಿರೇಮಠ, ವಿಕ್ರಂ ದೇಶಪಾಂಡೆ, ಮನೋಜ ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದರು. ಸ್ಥಳಕ್ಕೆ ಬಂದಿದ್ದ ಮಾಜಿ ಶಾಸಕ ವೀರಣ್ಣ ಚರಂತಿಮಠ, ಬಿಜೆಪಿ ಬೆಳಗಾವಿ ಸಹ ಪ್ರಭಾರಿ ಬಸವರಾಜ ಯಂಕಂಚಿ, ‘ಅಗೌರವವಾಗಿ ನಡೆದುಕೊಂಡ ಪೊಲೀಸ್ ವಿರುದ್ಧ ಕ್ರಮಗೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಪೊಲೀಸ್ ಠಾಣೆಗೆ ಹೋದರೆ ಶಾಸಕರು ಹೇಳಿದಂತೆ ಕೇಳುತ್ತೇನೆ ಎಂದು ಹೇಳುತ್ತಾನಂತೆ, ಪೊಲೀಸರೇ ಕಾನೂನು ಪ್ರಕಾರ ನಡೆದುಕೊಳ್ಳದಿದ್ದರೆ ಹೇಗೆ?’ ಎಂದು ಪ್ರಶ್ನಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ‘ಘಟನೆ ಬಗ್ಗೆ ವಿಚಾರಣೆ ನಡೆಸಲಾಗುವುದು. ತಪ್ಪು ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಎಲ್ಲರೂ ಮನೆಗೆ ತೆರಳಬೇಕು’ ಎಂದು ಮನವಿ ಮಾಡಿದರು. ವೃತ್ತದಲ್ಲಿ ಪೊಲೀಸ್‌ ಬಂದೋಬಸ್ತ್‌ ಹೆಚ್ಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT