ಬಾದಾಮಿ: ಚಾಲುಕ್ಯರ ರಾಜಧಾನಿಯಲ್ಲಿ ಪುಲಿಕೇಶಿ ಮತ್ತು ಬಸವೇಶ್ವರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬೇಕು ಎಂದು ಆಗ್ರಹಿಸಿ ಮಂಡ್ಯದ ಕದಂಬ ಸೈನ್ಯದ ಅಧ್ಯಕ್ಷ ಬೇಕ್ರಿ ರಮೇಶ ಮತ್ತು ಪದಾಧಿಕಾರಿಗಳು ತಹಶೀಲ್ದಾರ್ ಎಸ್.ಎಫ್. ಬೊಮ್ಮನ್ನವರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರದ ಹೃದಯ ಯೋಜನೆಯಲ್ಲಿ ಪಾರಂಪರಿಕ ನಗರದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಎರಡು ಪುಲಿಕೇಶಿ ಮತ್ತು ಬಸವೇಶ್ವರ ಮೂರ್ತಿಗಳನ್ನು ತಯಾರಿಸಿ ಮೂರು ವರ್ಷಗಳಾದರೂ ಪ್ರತಿಷ್ಠಾಪಣೆಯಾಗಿಲ್ಲ. ತಾಲ್ಲೂಕು ಆಡಳಿತ ಮತ್ತು ಸ್ಥಳೀಯ ಪುರಸಭೆ ಸೂಕ್ತ ಸ್ಥಳ ಗುರುತಿಸಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕದಂಬ ಸೈನ್ಯ ರಾಜ್ಯ ಕಾರ್ಯದರ್ಶಿ ವಿನಾಯಕ ಸೊಂಡೂರ, ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಶಿವು ಇಸರಡ್ಡಿ, ಬಸವನಗೌಡ ಪಾಟೀಲ, ರವಿ ಹೊಸೂರ, ಅಪ್ಪಣ್ಣ ಹುಂಡೆಕಾರ, ಅಶೋಕ ಸಾತನ್ನವರ, ಶಾಂತಯ್ಯ ಹಿರೇಮಠ ,ಇರ್ಫಾನ್ ಬೀಳಗಿ, ಸುರೇಶಗೌಡ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-19-574609046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.