ಜಮಖಂಡಿ: ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ರೂಪಿಸಿಕೊಳ್ಳಲು ಅಡಿಪಾಯ ಇದ್ದಂತೆ. ಕೇವಲ ಅಂಕ ಗಳಿಕೆ ಶಿಕ್ಷಣವಲ್ಲ, ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಅನಿಲ್ ಬಡಿಗೇರ ಹೇಳಿದರು.

ತಾಲ್ಲೂಕಿನ ತುಬಚಿ ಗ್ರಾಮದ ರಾಣಿ ಚನ್ನಮ್ಮ ಹಿರಿಯ ಪ್ರಾಥಮಿಕ ಶಾಲೆಯ 21ನೇ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರೈತ ಮುಖಂಡ ಬಿ.ಎಸ್. ಸಿಂಧೂರ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು.

ಸದಾಶಿವ ಬಾಲಪ್ಪನವರ ಮಾತನಾಡಿದರು. ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಕಳೆದ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡಾಕೂಟದಲ್ಲಿ ವಿಜೇತರಿಗೆ ಸನ್ಮಾನಿಸಲಾಯಿತು.

ಗುರುರಾಜ ಕುಲಕರ್ಣಿ, ಮಲ್ಲಿಕಾರ್ಜುನ ಪಾಟೀಲ, ಬಸವರಾಜ ತೇಲಿ, ಶಿವಲಿಂಗಪ್ಪ ಕಿತ್ತೂರು, ಜೀನಗೌಡ ಪಾಟೀಲ, ವಸಂತರಾವ ಕುಲಕರ್ಣಿ, ನಾರಾಯಣ ಅದ್ಯಾಪಕ, ರಮೇಶ್ ಕಣಬೂರ ಇದ್ದರು. ಆನಂದ ದೂಪದಾಳ ಸ್ವಾಗತಿಸಿದರು, ಅಕ್ಷತಾ ಬಿರಾದಾರ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.