ಮಹಾಲಿಂಗಪುರ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂವು ನೀಡಿ ಸ್ವಾಗತಿಸಲಾಯಿತು. ನಂತರ ಶಾರದಾ ಪೂಜೆ ನಡೆಸಿ ಪ್ರಾರ್ಥನೆ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿ ವಿತರಿಸಲಾಯಿತು.

ಶಿಕ್ಷಕರಾದ ಸದಾಶಿವ ಕಂಬಾರ, ಪಿ.ಸಿ.ಫಕೀರಣ್ಣವರ, ಎಂ.ಎಸ್.ಮಲಾಬಾದಿ, ಎಂ.ಜಿ.ಅಲ್ಲಾಖಾನ, ಆರ್.ಎಸ್.ಬೀಳಗಿ, ಆರ್.ಎಸ್.ಲಮಾಣಿ ಇದ್ದರು.

ಸಮೀಪದ ರನ್ನಬೆಳಗಲಿ ಸರ್ಕಾರಿ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ಗಳನ್ನು ನೀಡಲಾಯಿತು.

ಸಸಿಗೆ ನೀರುಣಿಸುವ ಮೂಲಕ ಎಸ್ಡಿಎಂಸಿ ಅಧ್ಯಕ್ಷ ಯಮನಪ್ಪ ಆಲಗೂರ, ಪಟ್ಟಣ ಪಂಚಾಯಿತಿ ಸದಸ್ಯ ಪ್ರವೀಣ ಪಾಟೀಲ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯಶಿಕ್ಷಕಿ ಎಸ್.ಎಲ್.ಕಠಾರೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿದರು. ಪಟ್ಟಣದ ಪ್ರಮುಖ ಬೀದಿಯಲ್ಲಿ ಸಂಚರಿಸಿ ದಾಖಲಾತಿ ಆಂದೋಲನ ಹಮ್ಮಿಕೊಳ್ಳಲಾಯಿತು.

ಸದಾಶಿವ ಹಳ್ಳೂರ, ಶ್ರೀಶೈಲ ಬಬಲಾದಿ, ಸದಾಶಿವ ಗುಲಗಂಜಿಕೊಪ್ಪ, ಈರಪ್ಪ ಲೋಹಾರ, ಮಂಜುನಾಥ ಪಾಟೀಲ, ಬಂದವ್ವ ಲಾಲಸಿಂಗಿ, ಮಾಲವ್ವ ಹಂಚಿನಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.