ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ

Published : 12 ಸೆಪ್ಟೆಂಬರ್ 2024, 15:58 IST
Last Updated : 12 ಸೆಪ್ಟೆಂಬರ್ 2024, 15:58 IST
ಫಾಲೋ ಮಾಡಿ
Comments

ಬಾಗಲಕೋಟೆ: ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಎಕರೆಗೆ 3 ಕ್ವಿಂಟಲ್‍ನಂತೆ ಪ್ರತಿ ರೈತರಿಂದ ಗರಿಷ್ಠ ಪ್ರಮಾಣ 15 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸದಸ್ಯ ಕಾರ್ಯದರ್ಶಿ ಡಿ.ಎಸ್.ರೆಡ್ಡಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸ್ಥಾಪಿಸಲಾದ ಖರೀದಿ ಕೇಂದ್ರಗಳಲ್ಲಿ ನೋಂದಣಿ ಕಾರ್ಯ ಪ್ರಾರಂಭಿಸಲಾಗಿದೆ.

ಬಾಗಲಕೋಟೆ ತಾಲ್ಲೂಕಿನ ಖಜ್ಜಿಡೋಣಿ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ (99011 06360), ಬಾದಾಮಿ ತಾಲ್ಲೂಕಿನ ಕಗಲಗೊಂಬ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ (96118 59963), ಕೆಂದೂರ (94804 10494), ನಂದಿಕೇಶ್ವರ (76249 51919), ಹೆಬ್ಬಳ್ಳಿ (99162 70586), ಮುಧೋಳ ತಾಲ್ಲೂಕಿನ ಜುನ್ನೂರ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ (82966 37794), ಬೀಳಗಿ ತಾಲ್ಲೂಕಿನ ಸೊನ್ನ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ (96322 89239), ಹುನಗುಂದದ ಟಿ.ಎ.ಪಿ.ಸಿಎಂಎಸ್ (94802 62655) ಖರೀದಿ ಕೇಂದ್ರ ತೆರೆಯಲಾಗಿದೆ.

ರೈತರು ಆಧಾರ್ ಕಾರ್ಡ್, ಪಹಣಿ ಪತ್ರಿಕೆ, ಆಧಾರ್ ಲಿಂಕ್‌ ಆಗಿರುವ ರಾಷ್ಟ್ರೀಕೃತ ಬ್ಯಾಂಕಿನ ಪಾಸ್‌ಬುಕ್ ಪ್ರತಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಮಾಹಿತಿಗೆ ಬಾಗಲಕೋಟೆಯ ಕೆ.ಓ.ಎಫ್‌ ಶಾಖಾ ವ್ಯವಸ್ಥಾಪಕರನ್ನು (99005 53056) ಸಂಪರ್ಕಿಸಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT