ಬೀಳಗಿ: ಪ್ಲಾಸ್ಟಿಕ್ ರಾಷ್ಟ್ರಧ್ವಜಗಳನ್ನು ಮಾರಾಟ ಮಾಡಬೇಡಿ ಎಂದು ತಾಲ್ಲೂಕಿನ ವ್ಯಾಪಾರಸ್ಥರಿಗೆ ತಹಶೀಲ್ದಾರ್ ವಿನೋದ ಹತ್ತಳ್ಳಿ ಸೂಚಿಸಿದರು.

ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಜರುಗಿದ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ವ್ಯಾಪಾರಸ್ಥರು ಪ್ಲಾಸ್ಟಿಕ್ ಧ್ವಜವನ್ನು ಮಾರುವುದಾಗಲಿ, ಸಾರ್ವಜನಿಕರು ಅವುಗಳನ್ನು ಬಳಕೆ ಮಾಡುವುದಾಗಲಿ ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಬಗೆಯ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಸ್ವಾತಂತ್ರ್ಯ ದಿನಾಚರಣೆ ಸಂಬಂಧ ರಚಿಸಲಾದ ವಿವಿಧ ಸಮಿತಿಗಳ ಸಿದ್ಧತೆ ಕುರಿತು ಚರ್ಚಿಸಿದರು. ಆಗಸ್ಟ್ 15ರಂದು ಬೆಳಿಗ್ಗೆ 8.15 ಕ್ಕೆ ಗ್ರಾಮ ಚಾವಡಿ ಬಳಿ ಹಾಗೂ 9ಕ್ಕೆ ತಹಶೀಲ್ದಾರ್ ಕಾರ್ಯಾಲಯದಲ್ಲಿ ಶಾಸಕ ಜೆ.ಟಿ.ಪಾಟೀಲ ಧ್ವಜಾರೋಹಣ ಮಾಡಲಿದ್ದಾರೆ. ತಾಲ್ಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಸಮಯಕ್ಕೆ ಮುಂಚಿತವಾಗಿ ಹಾಜರಿರಲು ತಿಳಿಸಿದರು.

ಮಾಜಿ ಸೈನಿಕರೂ ಸೇರಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನ ಮಾಡಲಾಗುತ್ತಿದೆ. ನಂತರ ಸಾಂಸ್ಕೃತಿಕ, ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಆದಾಪುರ, ಸಿಪಿಐ ಎಚ್. ಬಿ.ಸಣಮನಿ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ದೇವಿಂದ್ರ ಧನಪಾಲ,ಸಾರಿಗೆ ಇಲಾಖೆಯ ಆರ್.ಸಿ.ಖೇಡದ, ಹೆಸ್ಕಾಂ ಎಇಇ ಮಂಜುನಾಥ ಬೋಕಿ, ತೋಟಗಾರಿಕೆ ಇಲಾಖೆಯ ವಿವೇಕಾನಂದ ಕೆರೂರ,ಮಹಾದೇವ ಹಾದಿಮನಿ,ಕೊಮಾರ ದೇಸಾಯಿ, ಸಿದ್ದು ಮಾದರ,ಸಿದ್ದು ಸೊನ್ನದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.