ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಬಕವಿ ಬನಹಟ್ಟಿ: ಮತ ಎಣಿಕೆ; ತಾಲ್ಲೂಕು ಆಡಳಿತ ಸಜ್ಜು

Last Updated 28 ಡಿಸೆಂಬರ್ 2020, 16:27 IST
ಅಕ್ಷರ ಗಾತ್ರ

ರಬಕವಿ ಬನಹಟ್ಟಿ: ಇದೇ 30 ರಂದು ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆಗೆ ತಾಲ್ಲೂಕು ಆಡಳಿತ ಸಂಪೂರ್ಣ ಸಜ್ಜಾಗಿದೆ ಎಂದು ತಹಶೀಲ್ದಾರ್ ಪ್ರಶಾಂತ ಚನಗೊಂಡ ತಿಳಿಸಿದರು.

ಅವರು ಭಾನುವಾರ ಸ್ಥಳೀಯ ಎಸ್‍ಟಿಸಿ ಕಾಲೇಜಿನಲ್ಲಿ ನಿರ್ಮಾಣ ಮಾಡಲಾದ ಮತ ಎಣಿಕೆ ಕೇಂದ್ರವನ್ನು ಪರಿಶೀಲನೆ ಮಾಡಿ ‘ಪ್ರಜಾವಾಣಿ‘ಯೊಂದಿಗೆ ಮಾತನಾಡಿದರು. 17 ಗ್ರಾಮ ಪಂಚಾಯಿತಿಗಳ ಮತ ಎಣಿಕೆಯನ್ನು 17 ಪ್ರತ್ಯೇಕ ಕೋಣೆಗಳಲ್ಲಿ ಕೈಗೊಳ್ಳಲಾಗುವುದು. 38 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಮೂರು ಸುತ್ತಿನ ಮತಗಳ ಎಣಿಕೆ ನಡೆಯಲಿದೆ. ಮತಗಳ ಎಣಿಕೆ ಕಾರ್ಯಕ್ಕೆ 136 ಸಿಬ್ಬಂದಿ ನೇಮಕ ಮಾಡಲಾಗಿದೆ. ಒಂದು ಟೇಬಲ್‍ಗೆ ಒಬ್ಬ ಮತಗಳ ಎಣಿಕೆ ಮೇಲ್ವಿಚಾರಕ ಮತ್ತು ಇಬ್ಬರು ಸಹಾಯಕ ಎಣಿಕೆ ಅಧಿಕಾರಿಗಳು ಇರುತ್ತಾರೆ.

ಡಿಸೆಂಬರ್‍ 22 ರಂದು ಯಾವುದೇ ಲೋಪ ದೋಷಗಳು ಇಲ್ಲದೆ ಮತದಾನವನ್ನು ಕೈಗೊಳ್ಳಲಾಗಿದ್ದು, ಈಗ ಯಾವುದೇ ತೊಂದರೆಯಾಗದಂತೆ ಮತಗಳ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಪ್ರಶಾಂತ ಚನಗೊಂಡ ತಿಳಿಸಿದರು. ಉಪ ತಹಶೀಲ್ದಾರ್ ಶ್ರೀಕಾಂತ ಮಾಯನ್ನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT