ಕಮತಗಿ (ಅಮೀನಗಡ): ‘ವೃತ್ತಿಯಲ್ಲಿ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಮಕ್ಕಳಲ್ಲಿ ಮೌಲ್ಯಗಳನ್ನು ಬೆಳೆಸುವುದು ಶಿಕ್ಷಕರ ಗುರುತರ ಜವಾಬ್ದಾರಿಯಾಗಿದೆ’ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಂಡ್ಯ ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ವಿಷ್ಣು ಶಿಂಧೆ ಅಭಿಪ್ರಾಯಪಟ್ಟರು.

ಶುಕ್ರವಾರ ಪಟ್ಟಣದ ಶ್ರೀಮತಿ ವೈ. ಆರ್.ಪಾಟೀಲ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಬಾಗಲಕೋಟೆ ಗುಳೇದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯಸ್ಥಾಪಕ ನಿರ್ದೇಶಕಿ ಡಾ.ಅಪೂರ್ವ ಗುಳೇದ ಮಾತನಾಡಿ, ‘ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದು, ಸಮಾಜಮುಖಿಯಾಗಿ ಕಾರ್ಯ ಮಾಡುವ ಅವಶ್ಯಕತೆ ಇದೆ’ ಎಂದರು.

ಸಂಘದ ಅಧ್ಯಕ್ಷ ಹುಚ್ಚೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಂಘದ ಸಹ ಕಾರ್ಯದರ್ಶಿ ವಿದ್ಯಾಧರ ಮಳ್ಳಿ ಅಧ್ಯಕ್ಷತೆ ವಹಿಸಿದ್ದರು.

ನಿರ್ದೇಶಕ ಮಂಡಳಿಯ ಎಂ.ಬಿ ಶಾಬಾದಿ, ಆರ್. ಎಸ್ ಬಾಫ್ರಿ, ಆಡಳಿತಾಧಿಕಾರಿ ಎ.ಎಸ್ ಕಲ್ಯಾಣಶೆಟ್ಟಿ, ಪ್ರಾಚಾರ್ಯೆ ಪಿ.ಐ.ಮೋಮಿನ, ಸಾಂಸ್ಕೃತಿಕ ವಿಭಾಗದ ಅನುಪಮಾ ಕಲ್ಯಾಣಿಶೆಟ್ಟಿ, ಎಂ.ಎಂ ಲಾಯದಗುಂದಿ, ಜಿ.ಎಲ್. ವಾಲಿಕಾರ, ಎಸ್.ವಿ. ಕಲ್ಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.