ತೇರದಾಳ: ಪಟ್ಟಣದ ರಬಕವಿ ರಸ್ತೆಯಲ್ಲಿರುವ ಕೆಎಚ್ಡಿಸಿ ಕಾಲೊನಿಯ ಶಿವಾನಂದ ಬೆಳಕೂಡ ಎಂಬುವವರ ಮನೆಯಲ್ಲಿನ ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಬುಧವಾರ ಬೆಳಗಿನ ಜಾವ ಸಂಭವಿಸಿದೆ.

ಚೇತನ ಶಿವಾನಂದ ಬೆಳಕೂಡ (27) ಹಾಗೂ ಅವರ ತಾಯಿ ಶೋಭಾ ಶಿವಾನಂದ ಬೆಳಕೂಡ (48) ಸ್ಪೋಟದಲ್ಲಿ ಗಾಯಗೊಂಡಿದ್ದಾರೆ. ಇಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸ್ಥಳಕ್ಕೆ ತೇರದಾಳ ತಹಶೀಲ್ದಾರ್ ವಿಜಯಕುಮಾರ ಕಡಕೋಳ, ಠಾಣಾಧಿಕಾರಿ ಎಸ್.ಕೆ.ಸಿಂಗನ್ನವರ, ಆಹಾರ ನಿರೀಕ್ಷಕ ಎಸ್.ಐ.ಸೂಡಿ, ಗ್ರಾಮ ಆಡಳಿತಾಧಿಕಾರಿ ರೇವಣಸಿದ್ದ ಕಾಮತೆ, ಪುರಸಭೆ ಮುಖ್ಯಾಧಿಕಾರಿ ಎಫ್.ಬಿ.ಗಿಡ್ಡಿ ಭೇಟಿ ನೀಡಿದ್ದಾರೆ. ಸ್ಪೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಪ್ರಾಥಮಿಕ ವರದಿ ಕಳುಹಿಸಲಾಗಿದೆ ಮುಂದಿನ ಕ್ರಮದ ಕುರಿತು ತನಿಖೆ ಕೈಗೊಳ್ಳಲಾಗುವುದು ಎಂದು ಆಹಾರ ನಿರೀಕ್ಷಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-19-823625727

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.