ತೇರದಾಳ: ಈ ಭಾಗದ ಪವಾಡ ಪುರುಷರಾದ ಗುರುದೇವ ಬ್ರಹ್ಮಾನಂದ ಶಿವಯೋಗಿಗಳ 50ನೇ ಹಾಗೂ ಗುರುದೇವ ಸಿದ್ಧೇಶ್ವರ ಶಿವಯೋಗಿಗಳ 20ನೇ ಪುಣ್ಯಾರಾಧನೆ ಅಂಗವಾಗಿ ಪಟ್ಟಣದಲ್ಲಿ ಶನಿವಾರ ಪಲ್ಲಕ್ಕಿ ಉತ್ಸವ ಹಾಗೂ ಭಾವಚಿತ್ರದ ಮೆರವಣಿಗೆ ಶ್ರದ್ಧಾ–ಭಕ್ತಿಯಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಗುರುದೇವ ಬ್ರಹ್ಮಾನಂದ ಆಶ್ರಮದಲ್ಲಿ ರುದ್ರಾಭಿಷೇಕ, ವಿಶೇಷ ಅಲಂಕಾರಿತ ಪೂಜೆ, ಮಂಗಳಾರತಿ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಪುಣ್ಯಾರಾಧನೆ ಅಂಗವಾಗಿ ಬಬಲೇಶ್ವರ ತಾಲ್ಲೂಕಿನ ನಾಗರಾಳ ಪರಮಾನಂದ ಯೋಗಾಶ್ರಮದ ಅನಂತಾನಂದ ಶರಣರಿಂದ ಹಮ್ಮಿಕೊಂಡಿದ್ದ ಆಧ್ಯಾತ್ಮಿಕ ಪ್ರವಚನದ ಮಹಾಮಂಗಲ ಹಾಗೂ ಜಪಯಜ್ಞ ಕಾರ್ಯಕ್ರಮ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಉತ್ಸವವು ಗುಮ್ಮಟ ಗಲ್ಲಿ, ಕಾಳಿನ ಬಜಾರ, ಕನ್ನಡ ಶಾಲೆ, ದ್ವಾರ ಬಾಗಿಲು, ಎಸ್ಬಿಐ ಮುಖಾಂತರ ಕಲ್ಲಟ್ಟಿ ಗಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ತಲುಪಿತು. ಕರಡಿ ಮೇಳ ಉತ್ಸವಕ್ಕೆ ಕಳೆ ಕಟ್ಟಿತು. ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಮಿಟಿಯವರು, ಭಕ್ತರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-19-816763171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.