ತೇರದಾಳ: ಒಂದು ಕುಟುಂಬದಲ್ಲಿ ಒಬ್ಬ ವ್ಯಕ್ತಿ ತಂಬಾಕು ವ್ಯಸನಿಯಾದರೆ ಅನಾರೋಗಕ್ಕೆ ರಹದಾರಿಯಾಗುವುದಲ್ಲದೆ ಕೌಟುಂಬಿಕ ವ್ಯವಸ್ಥೆ ಹಾಳಾಗುತ್ತದೆ. ಆದ್ದರಿಂದ ಸರ್ಕಾರ ತಂಬಾಕು ಹಾಗೂ ಅದರ ಉತ್ಪನ್ನಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕಿದೆ ಎಂದು ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಚೇರ್ಮನ್ ಡಾ.ಎಂ.ಎಸ್.ದಾನಿಗೊಂಡ ಹೇಳಿದರು.

ದಾನಿಗೊಂಡ ಆಯುರ್ವೇದಿಕ್ ವೈದ್ಯಕೀಯ ಕಾಲೇಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ ಹಾಗೂ ತೇರದಾಳ ಪೊಲೀಸ್ ಠಾಣೆ ಆಶ್ರಯದಲ್ಲಿ ಶುಕ್ರವಾರ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ನಿಷೇಧ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ತಂಬಾಕು ನಿಷೇಧ ಕುರಿತಂತೆ ಮಹತ್ವದ ಕಾನೂನು ಜಾರಿಯಾಗಬೇಕು. ತಂಬಾಕು ಬೆಳೆಯುವ ರೈತರಿಗೆ ಅನ್ಯಾಯವಾಗದಂತೆ ಅದನ್ನು ಔಷಧ ಮತ್ತಿತರ ತಯಾರಿಕೆಗೆ ಮಾತ್ರ ಬಳಸಿ, ಸೇವನೆಗೆ ನಿಷಿದ್ಧವಿರುವ ಕಾನೂನು ಜಾರಿಯಾಗುವ ಮೂಲಕ ಯುವ ಜನತೆಯ ಆರೋಗ್ಯ ಕಾಪಾಡಬೇಕಿದೆ ಎಂದರು.

ಬನಹಟ್ಟಿಯ ಸರ್ಕಾರಿ ಸಹಾಯಕ ಅಭಿಯೋಜಕರಾದ ಆರ್.ಜಿ.ಶಹಾ ಮಾತನಾಡಿ, ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ನಿಯಂತ್ರಣ ಕಾಯ್ದೆ ಬಗ್ಗೆ ವಿವರಿಸಿದರು.

ಬನಹಟ್ಟಿ ಸೆಷನ್ಸ್ ನ್ಯಾಯಾಧೀಶೆ ಸೌಮ್ಯ ಹೂಲಿ ಕಾರ್ಯಕ್ರಮ ಉದ್ಘಾಟಿಸಿದರು. ತೇರದಾಳ ಪಿಎಸೈ ಶಿವಾನಂದ ಸಿಂಗನ್ನವರ, ವಕೀಲರ ಸಂಘದ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ಡಾ.ಪಿ.ಬಿ.ಅಪರಾಜ, ಉಪನ್ಯಾಸಕರಾದ ಡಾ.ಶಕುಂತಲಾ ಸಾಸಿವೆಹಳ್ಳಿ, ಡಾ.ನೇಹಾ ರೋಕಡೆ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-19-587225073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.