ಹುನಗುಂದ: ‘ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಂಬಾಕು ಮುಕ್ತ ಸಮಾಜ ನಿರ್ಮಿಸಲು ಶ್ರಮಿಸಬೇಕು’ ಎಂದು ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಮಹಾಂತೇಶ ಮಠದ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ನಡೆದ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಹುನಗುಂದ ಮತ್ತು ಇಳಕಲ್ ತಾಲ್ಲೂಕು ಪಂಚಾಯತಿ ವತಿಯಿಂದ ಶನಿವಾರ ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಅಂಗವಾಗಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಂಬಾಕು ಮತ್ತು ಸಿಗರೇಟ್ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ. ಆದ್ದರಿಂದ ತಂಬಾಕು ಸೇವನೆಯನ್ನು ಪ್ರತಿಯೊಬ್ಬರೂ ತ್ಯಜಿಸಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಮಾತನಾಡಿ, ‘ಅಮೂಲ್ಯವಾದ ಜೀವನವನ್ನು ತಂಬಾಕು, ಗುಟ್ಕಾ ಸೇವನೆಯಿಂದ ಹಾಳು ಮಾಡಿಕೊಳ್ಳಬಾರದು’ ಎಂದರು.

ವಕೀಲ ಮಹಾಂತೇಶ ಅವಾರಿ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಕಠಾಣಿ, ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಎಂ.ಎ. ಸಂಗಮಕರ, ಆರ್.ಬಾಬು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.