ಶುಕ್ರವಾರ, ಆಗಸ್ಟ್ 19, 2022
27 °C

ಮುಧೋಳ: ಸಿಡಿಲು ಬಡಿದು ಬಾಲಕ ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಮುಧೋಳ ತಾಲ್ಲೂಕಿನ ಚಿಚಖಂಡಿ ಕೆ.ಡಿ ಗ್ರಾಮದ ದರ್ಶನ್ ಫಕೀರಪ್ಪ ಮಾದರ (14) ಮಂಗಳವಾರ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ದರ್ಶನ್ ತನ್ನ ಅಪ್ಪ ಫಕೀರಪ್ಪ ಮಾದರ ಹಾಗೂ ಸಹೋದರ ಆಕಾಶ ಅವರೊಂದಿಗೆ ಸಂಜೆ ಹೊಲದಲ್ಲಿ ಕುರಿಗಳೊಂದಿಗೆ ಇದ್ದಾಗ ಸಿಡಿಲು ಬಡಿದಿದೆ. ಈ ವೇಳೆ ದರ್ಶನ್  ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಅವರನ್ನು ಮುಧೋಳದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಪರಿಹಾರ ವಿತರಣೆಗೆ ಸೂಚನೆ: ಬಾಲಕನ ಕುಟುಂಬದ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ₹5 ಲಕ್ಷ ಪರಿಹಾರ ವಿತರಣೆಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
 
ಮೃತಪಟ್ಟ ಬಾಲಕನ ಕುಟುಂಬದ ಇತರ ಸದಸ್ಯರಿಗೂ ಸಿಡಿಲಿನಿಂದ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ಕೊಡಿಸಿ, ಪರಿಹಾರ ಧನ ನೀಡುವಂತೆ ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು