ಬಾಗಲಕೋಟೆ: ಪಠ್ಯ ಬೋಧನೆ ಮುಗಿದು ತಿಂಗಳಾದರೂ ಉತ್ತರ ಪತ್ರಿಕೆಗಳ ಕೊರತೆಯಿಂದ ಬಾಗಲಕೋಟ ವಿಶ್ವವಿದ್ಯಾಲಯದ ಪದವಿಯ ಒಂದು ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆಗಳು ನಡೆದಿಲ್ಲ. 20 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯ ನಿರೀಕ್ಷೆಯಲ್ಲಿದ್ದಾರೆ.

ಶೈಕ್ಷಣಿಕ ವೇಳಾಪಟ್ಟಿಯಂತೆ ಪದವಿಯ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿಬಿಎ, ಬಿಸಿಎ ಒಂದನೇ ಸೆಮಿಸ್ಟರ್ ಡಿಸೆಂಬರ್ 12 ರಂದು, ಪದವಿಯ 3ನೇ ಸೆಮಿಸ್ಟರ್ ಪಠ್ಯಬೋಧನೆಯು ಡಿಸೆಂಬರ್ 24 ರಂದು ಪೂರ್ಣಗೊಂಡಿದೆ. ಅಲ್ಲಿಂದ ವಿದ್ಯಾರ್ಥಿಗಳು ಮನೆಯಲ್ಲಿ ಇದ್ದುಕೊಂಡೇ ಅಧ್ಯಯನ ನಡೆಸಿದ್ದಾರೆ. ಆದರೆ, ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿಲ್ಲ.

ಶೈಕ್ಷಣಿಕ ವೇಳಾಪಟ್ಟಿಯಂತೆ ಪಠ್ಯ ಬೋಧನೆ ವಿಳಂಬವಾಗಬಾರದು. ಹೆಚ್ಚುವರಿ ತರಗತಿಗಳ ಮೂಲಕ ಪಠ್ಯ ಪೂರ್ಣಗೊಳಿಸಲು ವಿಶ್ವವಿದ್ಯಾಲಯ ಸೂಚಿಸಿತ್ತು. ಹಲವು ಕಾಲೇಜುಗಳು ಪಠ್ಯ ಬೋಧನೆ ಪೂರ್ಣ ಮಾಡಿವೆ.

ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ 70ಕ್ಕೂ ಹೆಚ್ಚು ಕಾಲೇಜುಗಳಿವೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮುಂಚಿತವಾಗಿ ಶುಲ್ಕ ಭರಿಸಿರುತ್ತಾರೆ. ಆದರೂ, ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉತ್ತರ ಪತ್ರಿಕೆಗಳನ್ನು ನಿಗದಿತ ಅವಧಿಯಲ್ಲಿ ಪೂರೈಸಲು ಆಗದಿರುವುದು ಹೇಗೆ ಎಂಬ ಪ್ರಶ್ನೆ ವಿದ್ಯಾರ್ಥಿಗಳು ಮತ್ತು ಕಾಲೇಜು ಆಡಳಿತಗಳದ್ದು.

‘ವಿಶ್ವವಿದ್ಯಾಲಯದಿಂದ ಪರೀಕ್ಷಾ ದಿನಾಂಕ ಪ್ರಕಟಿಸುವುದನ್ನು ಇಂದು, ನಾಳೆ ಎಂದು ಹೇಳಲಾಗುತ್ತಿದೆ. ಆದರೆ, ಈವರೆಗೆ ದಿನಾಂಕ ಪ್ರಕಟಿಸಿಲ್ಲ. ತಿಂಗಳಿಂದ ಮನೆಯಲ್ಲೇ ಅಧ್ಯಯನ ಮಾಡುತ್ತಿದ್ದೇವೆ. ವಿಳಂಬವಾದರೆ, ಮುಂದೆ ಅಕಾಡೆಮಿಕ್ ವರ್ಷ ವಿಳಂಬವಾಗಿ ವಿವಿಧ ಪರೀಕ್ಷೆಗಳಿಗೆ ಹಾಜರಾಗಲು ತೊಂದರೆಯಾಗುತ್ತದೆ’ ಎಂದು ವಿದ್ಯಾರ್ಥಿ ಸುರೇಶ ಪಾಟೀಲ ಅಳಲು ತೋಡಿಕೊಂಡರು.

‘ಪರೀಕ್ಷೆಗಳು ವಿಳಂಬ ಆಗಿರುವುದರಿಂದ ನಿತ್ಯ ವಿದ್ಯಾರ್ಥಿಗಳು ಕಾಲೇಜಿಗೆ ಬಂದು ಪರೀಕ್ಷೆ ಯಾವಾಗ ಎಂದು ಕೇಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ಪರೀಕ್ಷೆ ನಡೆಸಬೇಕು’ ಎಂದು ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಅರುಣಕುಮಾರ ಗಾಳಿ ಹೇಳಿದರು.

ಉತ್ತರ ಪತ್ರಿಕೆಗಳ ಮುದ್ರಣ ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ. ಫೆಬ್ರುವರಿ ಮೊದಲ ವಾರದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು
ಆನಂದ ದೇಶಪಾಂಡೆ, ಕುಲಪತಿ, ಬಾಗಲಕೋಟ ವಿಶ್ವವಿದ್ಯಾಲಯ, ಜಮಖಂಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.